ಜನಸಾಮಾನ್ಯರ ಅಧಿಕಾರಿ ಬಿ.ಡಿ.ಎ. ಅಧ್ಯಕ್ಷ!

ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Rakesh singh

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ  ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್ .ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಅಚ್ಚರಿಗೆ ಕಾರಣವಾಗಿದೆ.

ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದ್ರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *