ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Laxmi_Hebbalkar1

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು.

ನಾಳೆ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್​ಪೋರ್ಟಲ್​ ಸಿಎಂರಿಂದ ಲಾಂಚ್ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. 

https://imasdk.googleapis.com/js/core/bridge3.578.0_en.html#goog_975663134

ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ಅವರು ಹೇಳಿದರು. 

ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ.  ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಗೃಹಲಕ್ಷ್ಮಿ, ಯೋಜನೆಯು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ. 

ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ತೆರಿಗೆದಾರರು ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *