ಮಧ್ಯರಾತ್ರಿ ಮಾರಾಮಾರಿ ಮೂರು ಜನ ಆರೆಸ್ಟ್‌ ೫ ಜನ ಪರಾರಿ

ಸಿದ್ಧಾಪುರ ಕೊಂಡ್ಲಿ,ಹಾಳದಕಟ್ಟಾ ಭಾಗದಲ್ಲಿ ಶುಕ್ರವಾರ ಮಧ್ಯರಾತ್ರಿಯ ನಂತರ ನಡೆದ ಗಲಾಟೆಯಲ್ಲಿ ಮೂರು ಜನರಿಗೆ ಗಾಯಗಳಾಗಿದ್ದು ತೀವೃವಾಗಿ ಗಾಯಗೊಂಡ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಸಾಗಿಸಲಾಗಿದೆ. ಗಾಯಗೊಂಡವರಲ್ಲಿ ಕೇಶವ ಗೋವಿಂದ ನಾಯ್ಕ, ವಿನಯ ಮತ್ತು ಸಂತೋಷ ನಾಗರಾಜ್‌ ನಾಯ್ಕ ಹಣಜಿಬೈಲ್ ಸೇರಿದ್ದಾರೆ.‌

ಶುಕ್ರವಾರದ ಮಧ್ಯರಾತ್ರಿಯ ವೇಳೆ ವಿವಾದಿತ ಭೂಮಿಯಲ್ಲಿ ಮಧ್ಯರಾತ್ರಿಯ ವರೆಗೆ ಮಣ್ಣು ತುಂಬಿಸುತಿದ್ದ ನಾಗರಾಜ್‌ ನಾಯ್ಕ ಕುಟುಂಬದ ಸದಸ್ಯರ ಮೇಲೆ ಏಕಾಏಕಿ ದಾಳಿಮಾಡಿದ ೮ ಜನರ ತಂಡ ಮೂರು ಜನರಿಗೆ ಗಾಯಗೊಳಿಸಿತು.

ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ನಾಗರಾಜ್‌ ನಾಯ್ಕ ಹಣಜಿಬೈಲ್‌ ತಮ್ಮ ತಮ್ಮ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡುವ ಉದ್ದೇಶದಿಂದ ಬಂದ ೮ ಜನರ ತಂಡ ತಮ್ಮ ತಮ್ಮ ಮತ್ತು ಮಕ್ಕಳಿಬ್ಬರಿಗೆ ಮಾರಣಾಂತಿಕವಾಗಿ ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಿದ ಬಗ್ಗೆ ಪರಶುರಾಮ ಬಂಗಾರ್ಯ ನಾಯ್ಕ, ಗಣಪತಿ ಬಂಗಾರ್ಯ ನಾಯ್ಕ ನಾರಾಯಣ ಪರಶುರಾಮ ನಾಯ್ಕ ವೆಂಕಟ್ರಮಣ ಮುಕುಂದ ನಾಯ್ಕ,ಪ್ರಭು ಮುಕುಂದ ನಾಯ್ಕ, ಭರತ ಗಣಪತಿ ನಾಯ್ಕ ತಿಮ್ಮಪ್ಪ ವೆಂಕಟಪ್ಪ ನಾಯ್ಕ ಮತ್ತು ದಯಾನಂದ ತಿಮ್ಮಪ್ಪ ನಾಯ್ಕ ಸೇರಿದ ಒಟ್ಟೂ ೮ ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ಆರೋಪಿಗಳಲ್ಲಿ ೩ ಜನರು ಪೊಲೀಸ್‌ ವಶಕ್ಕೆ ಸಿಕ್ಕಿದ್ದು ಉಳಿದ ೫ ( ವೆಂಕಟ್ರಮಣ,ಪ್ರಭು, ಭರತ,ತಿಮ್ಮಪ್ಪ, ದಯಾನಂದ) ಜನರು ತಲೆಮರೆಸಿಕೊಂಡಿದ್ದಾರೆ.

ಶುಕ್ರವಾರದ ಮಧ್ಯಾಹ್ನದಿಂದ ನಡೆಯುತಿದ್ದ ಮಣ್ಣು ಬರಾವ್‌ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಿಗಳು ಪಿರ್ಯಾದುದಾರರಾದ ನಾಗರಾಜ್‌ ನಾಯ್ಕರ ಕುಟುಂಬದ ಮೂವರ ಮೇಲೆ ಮಧ್ಯರಾತ್ರಿಯ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾರಾಯಣ,ಪರಶುರಾಮ, ಗಣಪತಿ ಎನ್ನುವ ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *