

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು
ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.


ಕಾರವಾರ: ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ.Stay
ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.


ಅಘನಾಶಿನಿ ನದಿ ನೀರಿನ ಮಟ್ಟ ಏರಿಕೆಯಾದ ಕಾರಣ ಗದ್ದೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿತ್ತು. ಬೇಲಿ ಹಾಕುವ ವೇಳೆ ಉಲ್ಲಾಸ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈವೇಳೆ ಅವರನ್ನು ರಕ್ಷಿಸಲು ಮುಂದಾದ ಸತೀಶ ಕೂಡ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಗೋಕರ್ಣ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಜೀವಹಾನಿಯಾದ ಎರಡನೇ ಪ್ರಕರಣ ಇದಾಗಿದೆ. ಜುಲೈ 5ರಂದು ಕಾರವಾರ ತಾಲ್ಲೂಕಿನ ಅರಗಾ ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






