ಕೆ.ಪಿ.ಹೆಗಡೆಯವರಿಗೆ ಅನಂತಶ್ರೀ ಪ್ರಶಸ್ತಿ ಘೋಷಣೆ

ಸಿದ್ದಾಪುರ
ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆಯವರಿಗೆ ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದ ಅನಂತ ಹೆಗಡೆ ಹೆಸರಿನಲ್ಲಿ ನೀಡಲಾಗುವ ಅನಂತಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.


ಈ ವಿಷಯ ತಿಳಿಸಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಕಳೆದ ೧೨ ವರ್ಷಗಳಿಂದ ಕೊಳಗಿ ಅನಂತ ಹೆಗಡೆಯವರ ನೆನಪಿನಲ್ಲಿ ಪ್ರತಿಷ್ಠಾನ ಆರಂಭಿಸಲಾಗಿದ್ದು ಕಳೆದ ೭ ವರ್ಷದಿಂದ ಹಿರಿಯ,ಸಾಧಕ ಕಲಾವಿದರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದೆ. ಈ ಬಾರಿ ಸೆಪ್ಟೆಂಬರ್ ಎರಡನೇ ವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅನಂತ ಹೆಗಡೆಯವರ ಒಡನಾಡಿಗಳೂ ಆಗಿದ್ದ ಕೆ.ಪಿ.ಹೆಗಡೆಯವರಿಗೆ ಪ್ರಶಸ್ತಿಪ್ರದಾನ ಮಾಡುವದು ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.


ಕಳೆದ ೪ ದಶಕಗಳಿಗೂ ಅಧಿಕ ಕಾಲದಿಂದ ಯಕ್ಷಗಾನ ಬಡಗುತಿಟ್ಟಿನ ಭಾಗವತರಾಗಿ,ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಗುರುಗಳಾ ಗಿಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಪರಮೇಸ್ವರ ಹೆಗಡೆ ಎಸ್.ಎಸ್.ಎಲ್.ಸಿ ಬಳಿಕ ನಾರ್ಣಪ್ಪ ಉಪ್ಪೂರು, ಗಣಪತಿ ಹೆಗಡೆ,ಮಂಜುನಾಥ ಭಾಗವತ ಹೊಸ್ತೋಟರ ಶಿಷ್ಯರಾಗಿ ತಮ್ಮ ಕಲಾ ಬದುಕನ್ನು ಆಯ್ಕೆಮಾಡಿಕೊಂಡರು.೧೯೭೯ರಿಂದ ಯಕ್ಷಗಾನ ಕ್ಷೇತ್ರಕ್ಕೆ ಭಾಗವತರಾಗಿ ಪಾದಾರ್ಪಣೆ ಮಾಡಿ, ಕೋಟ,ಪೆರ್ಡೂರು,ಸಾಲಿಗ್ರಾಮ, ಮೂಲ್ಕಿ ಸೇರಿದಂತೆ ಅನೇಕ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ.
ಯಕ್ಷಗಾನ ಕಲಿಕಾ ಕೇಂದ್ರದ ಗುರುಗಳಾಗಿ ಕೆಲಸ ಮಾಡಿದ ಕೆ.ಪಿ.ಹೆಗಡೆ ಮನಾರ್ಣಪ್ಪ ಉಪ್ಪೂರರ ಛಾಪು,ಅಪೂರ್ವ ರಂಗತಂತ್ರ,ಏರುಶೃತಿಯಲ್ಲೂ ಹಾಡಬಲ್ಲ ಕಂಠ,ರಾಗ,ತಾಳ,ಲಯದಲ್ಲಿ ಅಪೂರ್ವ ಹಿಡಿತವನ್ನು ಹೊಂದಿದವರು ಎನ್ನುವುದು ವಿಶೇಷ. ಅಂದಿನಿಂದ ಈವರೆಗೆ ಅವರ ಗರಡಿಯಲ್ಲಿ ಸಾವಿರಕ್ಕೂ ಅಧಿಕ ಶಿಷ್ಯರು ಸಿದ್ಧರಾಗಿ ಹೆಸರುಗಳಿಸಿದ್ದಾರೆ. ಅವರ ಶಿಷ್ಯರಲ್ಲಿ ಪ್ರಸಿದ್ಧ ಭಾಗವತ,ಪ್ರತಿಷ್ಠಾನದ ಕಾರ್ಯದರ್ಶಿ ಕೇಶವ ಹೆಗಡೆ ಕೊಳಗಿ ಕೂಡ ಒಬ್ಬರು ಎನ್ನುವುದು ಹೆಮ್ಮೆ ಎಂದು ಅವರು ಪ್ರಕಟಣೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *