ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ನೌಕರರ ಸಹಕಾರ ಕೋರಿದ ಭೀಮಣ್ಣ

‌ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ ವತಿಯಿಂದ ಪಟ್ಟಣದ ರಾಘವೇಂದ್ರ ಮಠದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಕಾರ್ಯಕ್ರಮ ಸರಿಯಾಗಿ ಅನುಷ್ಠಾನಕ್ಕೆ ಬರಲು ನೌಕರರ ಪಾತ್ರ ದೊಡ್ಡದಿದೆ. ನಿಮ್ಮ ಅವಧಿಯಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ. ಏಳನೆ ವೇತನ ಆಯೋಗದ ಅನುಷ್ಠಾನ ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಸರ್ಕಾರದ ಕೆಲಸವನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಮಾಡುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದ ಅವರು, ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಸಮಸ್ತ ನೌಕರರು ಸಹಕಾರ ನೀಡುವಂತೆ ಸೂಚಿಸಿದರು.


ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಸರ್ಕಾರಿ ನೌಕರರ ಏಳನೆ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸರ್ಕಾರದ ಗಮನಕ್ಕೆ ತಂದು ಜಾರಿಗೆ ಪ್ರಯತ್ನಿಸಬೇಕು ಎಂದ ಅವರು, ಎನ್.ಪಿ.ಎಸ್ ರದ್ಧುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ನೂತನ ಶಾಸಕರಾದ ಭೀಮಣ್ಣ ನಾಯ್ಕ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಹಾಗೂ ನಿವೃತ್ತ ನೌಕರರನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಅಧಿಕ ಹಾಗೂ ಪಿಯುಸಿಯಲ್ಲಿ 90% ಕ್ಕಿಂತ ಅಧಿಕ ಅಂಕ ಗಳಿಸಿದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಮಾತನಾಡಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪ್ರಶಾಂತ ಜಿ.ಎಸ್., ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಉಪಸ್ಥಿತರಿದ್ದರು.
ಸರ್ಕಾರಿ ನೌಕರರ ಸಂಘದ ಖಜಾಂಚಿ ತೇಜಸ್ವಿ ನಾಯ್ಕ ಸ್ವಾಗತಿಸಿದರು. ಭೂಮಾಪನ ಇಲಾಖೆಯ ಉಷಾ ಪ್ರಶಾಂತ ನಾಯ್ಕ ನಿರೂಪಿಸಿದರು. ಪರಶುರಾಮ ನಾಯ್ಕ ಕಡಕೇರಿ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *