

ಸಿದ್ದಾಪುರ: ವಿದ್ಯೆ,ವಿನಯದ ದಾರಿ ತೋರುವ ಪ್ರತಿ ಶಿಕ್ಷಕ ಗೌರವಾರ್ಹ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು .
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಪಟ್ಟಣದ ಶಂಕರಮಠದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಗುರು ಸನ್ಮಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಶಿಕ್ಷಣದ ಮೂಲಕ ಮಾತ್ರ ದೇಶ ಹಾಗೂ ಸಮಾಜದ ಪ್ರಗತಿ ಕಾಣಲು ಸಾಧ್ಯ. ಯಾವ ಮಗುವು ಕೂಡ ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಪ್ರತಿ ಮಗು ಕೂಡ ಶಿಕ್ಷಣ ಪಡೆಯಬೇಕು. ರಾಧಾಕೃಷ್ಣನ್ ಅವರ ಆಶಯಗಳನ್ನು ಇಡೇರಿಸುವುದು ನಮ್ನೆಲ್ಲರ ಕರ್ತವ್ಯವಾಗಿದೆ. ಶಿಕ್ಷಕರು ಸಲ್ಲಿಸುತ್ತಿರುವ ಸೇವೆಗೆ ಸರಿಯಾದ ಗೌರವ ಸಿಗಬೇಕು. ಭಾರತ ಸಂಪದ್ಭರಿತ ರಾಷ್ಟ್ರವಾಗಲು ಎಲ್ಲರೂ ಶಿಕ್ಷಣ ಪಡೆಯಬೇಕು. ದೇಶದ ಶಿಲ್ಪಿಗಳನ್ನು ರೂಪಿಸುತ್ತಿರುವ ಶಿಕ್ಷಕರಿಗೆ ಹೃದಯಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಅನೇಕ ಸಮಸ್ಯೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ಈಗಾಗಲೇ ತರಲಾಗಿದೆ. ಸಿದ್ದಾಪುರದಲ್ಲಿ ಗುರುಭವನಕ್ಕೆ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿ ಸ್ಥಳ ಗುರುತಿಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರ ಕಾನೂನಾತ್ಮಕ ಬೇಡಿಕೆಗಳಿಗೆ ನಿಮ್ಮ ಪ್ರತಿನಿಧಿಯಾಗಿ ನಾನು ಕೂಡ ಧ್ವನಿಗೂಡಿಸುತ್ತೇನೆ. ನಿಮ್ಮ ಯಾವುದೇ ಸಮಸ್ಯೆ ಇದ್ದರು ಕೂಡ ಅದು ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು ಎಂದರು.


ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ ಪ್ರಾಸ್ತಾವಿಕ ಮಾತನಾಡಿ ಬೇಡಿಕೆಗಳ ಪಟ್ಟಿ ವಿವರಿಸಿ ಶಾಸಕರಿಗೆ ಮನವಿ ನೀಡಿದರು.
ಈ ವೇಳೆ ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ, ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ, ಪ್ರಧಾನಮಂತ್ರಿ ಪೋಷಣಾ ಅಭಿಯಾನದ ಸಹಾಯಕ ನಿರ್ದೇಶಕ ಭೂಮೇಶ್ ಎ.ಎಚ್, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ವಿ.ನಾಯ್ಕ, ತಾಲೂಕಾ ಕಸಾಪ ಅಧ್ಯಕ್ಷ ಗೋಪಾಲ ಭಾಶಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್.ಪಮ್ಮಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಲೋಕೇಶ ನಾಯ್ಕ, ಪಿಯುಸಿ ಉಪನ್ಯಾಸಕರ ಸಂಘದ ಅಧ್ಯಕ್ಷ ಮಂಜಪ್ಪ ಎಂ.ಜಿ., ಶಿಕ್ಷಣ ಸಂಯೋಜಕ ಮಹೇಶ ಹೆಗಡೆ ಉಪಸ್ಥಿತರಿದ್ದರು. ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಗೀತಾ ಬಿ.ಸಿ, ಶೃತಿ ಪಟಗಾರ ನಿರೂಪಿಸಿದರು. ಶಿಕ್ಷಕಿ ನಾಗರತ್ನಾ ನಾಯ್ಕ ಸಂಗಡಿಗರು ಪ್ರಾರ್ಥಿಸಿದರು. ಮೇಧಾ ಹೆಗಡೆ ಸಂಗಡಿಗರು ನಾಡಗೀತೆ ಹಾಡಿದರು. ಚೈತನ್ಯಕುಮಾರ ವಂದಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
