ಉತ್ತರ ಕನ್ನಡ ಬರ ಪೀಡಿತವಲ್ಲದ ೩ ತಾಲೂಕುಗಳು ಯಾವ್ಯಾವು?

ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ, ರಾಜ್ಯಸರ್ಕಾರದಿಂದ ಅಧಿಕೃತ ಘೋಷಣೆ

2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

Drought_hit1

ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಈ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲ್ಲೂಕುಗಳನ್ನು  ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.

ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ತೀವ್ರ ಬರಪೀಡಿತ 161 ತಾಲ್ಲೂಕುಗಳ ಪಟ್ಟಿ ಇಂತಿದೆ: ಬೆಂಗಳೂರು ನಗರ ಜಿಲ್ಲೆ  ಬೆಂಗಳೂರು ಪೊರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ  ಚಿತ್ರದುರ್ಗ ಜಿಲ್ಲೆಯ  ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು,  ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ,  ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾ ಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ.


_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *