ವಿಷ್ಣು ಗಜಾನನ ಭಟ್ಟ ಮೂರೂರು ಇನ್ನಿಲ್ಲ

.
ಸಿದ್ದಾಪುರ
ಬಡಗು ತಿಟ್ಟಿನ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ಮೂರೂರು ವಿಷ್ಣು ಗಜಾನನ ಭಟ್ಟ (೬೫) ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠದಲ್ಲಿ ಭಾನುವಾರ ನಿಧನಹೊಂದಿದರು.
ಮೂಲತಃ ಕುಮಟಾ ತಾಲೂಕಿನ ಮೂರೂರಿನವರಾದ ಅವರು ಕಳೆದ ಮೂರು ವರ್ಷದಿಂದ ಭಾನ್ಕುಳಿಮಠದಲ್ಲಿ ತಮ್ಮ ಪುತ್ರನೊಂದಿಗೆ ವಾಸವಾಗಿದ್ದರು. ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.
ಗುಂಡುಬಾಳ, ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ, ಶಿರಸಿ, ಪೆರ್ಡೂರು,ಮಂದಾರ್ತಿ, ಸಾಲಿಗ್ರಾಮ, ಪೂರ್ಣಚಂದ್ರ ಮತ್ತಿತರ ಯಕ್ಷಗಾನಮೇಳದಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆ ಗೈದಿದ್ದಾರೆ.


ದಾಕ್ಷಾಯಿಣಿ, ಸೀತೆ, ಅಂಬೆ, ಚಂದ್ರಮತಿ, ದಮಯಂತಿ ಮುಂತಾದ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ ಯಕ್ಷಗಾನ ಕಲಾಸಕ್ತರ ಮನೆಮಾತಾಗಿದ್ದರು. ತಮ್ಮ ಭಾವ ಪೂರ್ಣ ಅಭಿನಯ, ಮಾತುಗಾರಿಕೆಯಿಂದ ಅಪಾರ ಸಂಖ್ಯೆಯ ಅಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.
ಯಕ್ಷಗಾನ ಕಲಾರಂಗ ಪ್ರಶಸ್ತಿ, ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಅವರ ಅಂತ್ಯ ಸಂಸ್ಕಾರ ಭಾನ್ಕುಳಿಮಠದ ಶಂಕರಗಿರಿಯಲ್ಲಿ ಭಾನುವಾರ ನಡೆಯಿತು.
ಮಠದ ಪ್ರಮುಖರಾದ ಆರ್.ಎಸ್.ಹೆಗಡೆ ಹರಗಿ, ಎಂ.ಜಿ.ರಾಮಚಂದ್ರನ್, ಮಹೇಶ ಭಟ್ಟ ಚಟ್ನಳ್ಳಿ, ಶಾಂತಾರಾಮ ಹಿರೇಮನೆ, ಎಂ.ಎಂ.ಹೆಗಡೆ ಮಗೇಗಾರ ಸೇರಿದಂತೆ ಮಠದ ಶಿಷ್ಯವೃಂದದವರಿದ್ದರು.


ವಿಷ್ಣು ಭಟ್ಟ ಅವರ ನಿಧನಕ್ಕೆ ದಿವಾನ್ ಯಕ್ಷಸಮೂಹ ಹಾರ್ಸಿಕಟ್ಟಾ, ಯಕ್ಷಚಂದನ ದಂಟಕಲ್, ಕಲಾಭಾಸ್ಕರ ಇಟಗಿ, ಸರಸ್ವತಿ ಕಲಾ ಟ್ರಸ್ಟ್ ಹೊಸಗದ್ದೆ ಸಂಘಟನೆ, ಖ್ಯಾತ ಭಾಗವತ ಕೇಶವ ಹೆಗಡೆ ಕೊಳಗಿ, ಸ್ರ್ತೀ ವೇಷಧಾರಿ ಭಾಸ್ಕರ ಜೋಶಿ ಶಿರಳಗಿ, ಮಹಾಬಲೇಶ್ವರ ಇಟಗಿ ಸೇರಿದಂತೆ ಅನೇಕ ಯಕ್ಷಗಾನ ಕಲಾವಿದರು, ಗಣ್ಯರು ಕಂಬನಿ ಮಿಡಿದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *