ಬೇಡಕಣಿ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ

ಸಿದ್ದಾಪುರ: ಚುಟುಕು ಬ್ರಹ್ಮ ಡಾ. ದಿನಕರ ದೇಸಾಯಿಯವರ ಕನಸಿನ ಕೂಸಾದ ತಾಲೂಕಿನ ಬೇಡ್ಕಣಿಯ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವವನ್ನು 2024ರ ಜನವರಿ 6 ಮತ್ತು 7 ರಂದು ನಡೆಸಲು ತೀರ್ಮಾನಿಸಲಾಗಿದೆ.


ಸೋಮವಾರ ಶಾಲೆಯ ಸಭಾಭವನದಲ್ಲಿ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ನಾಯ್ಕ ಬೇಡ್ಕಣಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಿನಾಂಕ ನಿಗದಿಗೊಳಿಸಲಾಗಿದೆ. ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಂದ 1965 ರಲ್ಲಿ ಸ್ಥಾಪನೆಯಾದ ಜನತಾ ವಿದ್ಯಾಲಯವು ಈಗಾಗಲೇ 58ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಕೊರೊನಾ ಮತ್ತಿತರ ಕಾರಣಗಳಿಂದ ಸುವರ್ಣ ಮಹೋತ್ಸವ ಮುಂದೂಡಲ್ಪಟ್ಟಿತ್ತು. ತಾಲೂಕಿನ ಕಡಕೇರಿ, ತ್ಯಾರ್ಸಿ, ಬೇಡ್ಕಣಿ, ಗುಂಜಗೋಡ, ಮರಲಗಿ, ವಾಟಗಾರ, ಹರಕನಳ್ಳಿ, ಹೊಸಳ್ಳಿ, ಭುವನಗುರಿ, ಮುತ್ತಿಗೆ, ಕುರಿಗೆತೋಟ, ಕಲ್ಕಣಿ ಮತ್ತಿತರ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣದ ಧಾರೆ ಎರೆದ ಜನತಾ ವಿದ್ಯಾಲಯದ ಸುವರ್ಣ ಮಹೋತ್ಸವ ಸದಾ ನೆನಪಿನಲ್ಲಿಡುವಂತೆ ಮಾಡಲು ಉತ್ಸವ ಸಮಿತಿ ಮುಂದಾಗಿದೆ ಎಂದು ವಿ.ಎನ್.ನಾಯ್ಕ ತಿಳಿಸಿದರು.


ಈಗಾಗಲೇ ವೇದಿಕೆ, ಊಟೋಪಚಾರ, ಹಣಕಾಸು, ಪ್ರಚಾರ, ಸುವರ್ಣ ಮಹೋತ್ಸವ ಸಂಚಿಕೆ ಸಮಿತಿ ರಚಿಸಲಾಗಿದೆ. ಆಯಾ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕಿದೆ. ಶಾಲೆಯ ನೆಲಹಾಸು ಹಾಗೂ ಸುಣ್ಣ-ಬಣ್ಣ ತುರ್ತಾಗಿ ಆಗಬೇಕಾಗಿದೆ‌. ಶಾಲೆಯ ಹಳೆಯ ವಿದ್ಯಾರ್ಥಿಗಳು, ದಾನಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಹಣ ಕ್ರೋಢಿಕರಿಸಿ ಅಗತ್ಯ ಕಾಮಗಾರಿ ನಡೆಸಬೇಕಿದ್ದು, ಸರ್ವರು ಸಹಕಾರ ನೀಡಬೇಕು.‌ ಶಾಲೆಯ ನೆಲಹಾಸು ಹಾಗೂ ಸುಣ್ಣ ಬಣ್ಣ ಮಾಡದೇ ಸುವರ್ಣ ಮಹೋತ್ಸವ ಆಚರಿಸಲು ಸಾಧ್ಯವಿಲ್ಲ. ನಾಳೆಯಿಂದಲೇ ದಾನಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸುವ ಕೆಲಸವಾಗಬೇಕು.‌ ಸ್ಥಳೀಯವಾಗಿ ಸಾರ್ವಜನಿಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉತ್ಸಾಹ ತೋರಬೇಕು ಎಂದರು.


ಈ ವೇಳೆ ಸುವರ್ಣ ಮಹೋತ್ಸವ ಸಮಿತಿಯ
ಗೌರವಾಧ್ಯಕ್ಷ ವಿ.ಎಸ್.ಹೆಗಡೆ, ಉಪಾಧ್ಯಕ್ಷರಾದ ಎ.ಬಿ.ನಾಯ್ಕ ಕಡಕೇರಿ, ಸುರೇಂದ್ರ ಗೌಡ, ಸದಸ್ಯರಾದ ನಾಗಪತಿ ನಾಯ್ಕ, ಪ್ರಶಾಂತ ನಾಯ್ಕ, ವೆಂಕಟ್ರಮಣ ನಾಯ್ಕ, ಪಾಂಡುರಂಗ ನಾಯ್ಕ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪಿ.ವಿ.ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಪ್ರತಿಮಾ ಪಾಲೇಕರ್, ಬೇಡ್ಕಣಿ ಗ್ರಾಮ ಪಂಚಾಯ್ತಿ ಸದಸ್ಯ ಗೋವಿಂದ ನಾಯ್ಕ, ಪ್ರಕಾಶ ನಾಯ್ಕ ಬೇಡ್ಕಣಿ, ಎಂ.ಬಿ.ನಾಯ್ಕ ನಾಯ್ಕ ಕಡಕೇರಿ, ಪ್ರಕಾಶ ನಾಯ್ಕ ಹರಕನಳ್ಳಿ, ಸಿ.ಎನ್.ಹೆಗಡೆ, ಶಿಕ್ಷಕ ಜಿ.ಟಿ.ಭಟ್ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *