ದಿನೇಶ್‌ ಅಮ್ಮಿನಮಟ್ಟು ಸೇರಿ ೬೮ ಜನರಿಗೆ ರಾಜ್ಯೋತ್ಸವ ಪ್ರಶಸ್ತಿ

ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

Soamanath, Bank janardhan And dingri nagaraj

ಬೆಂಗಳೂರು: ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ.

ಇದೀಗ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿವಿಧ ಸಾಧಕರ ಹೆಸರನ್ನು ಫೈನಲ್ ಮಾಡಲಾಗಿದೆ. ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಗಂಡಗಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಶಸ್ತಿ ಪುರಸ್ಕೃತರು ಮತ್ತು ಪ್ರಶಸ್ತಿ  ಸಂಘ ಸಂಸ್ಥೆಗಳ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 68 ಸಾಧಕರು ಹಾಗೂ 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.

ಮಂಗಳವಾರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರವು ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆ, ಯಕ್ಷಗಾನದಲ್ಲಿ ಕೆ.ಲೀಲಾವತಿ ಬೈಪಾಡಿತ್ತಾಯ, ಸಿನಿಮಾ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ, ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ.ನಾಗಣ್ಣ, ಸುಬ್ಬು ಹೊಲೆಯಾರ್, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‌ಮಟ್ಟು, ಮಾಯಾ ಶರ್ಮ ಸೇರಿದಂತೆ 68 ಸಾಧಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.

ಸರ್ಕಾರಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನ ನೀಡಿದ್ದ ಕುಣಿಕೇರಿ ಗ್ರಾಮದ ಹುಚ್ಚಮ್ಮ ಬಸಪ್ಪ ಚೌದ್ರಿ ಅವರಿಗೆ ಅರ್ಜಿ ಹಾಕದಿದ್ದರೂ ಸರ್ಕಾರ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇದು ಅಜ್ಜಿಯ ಬೆಟ್ಟದಷ್ಟು ಖುಷಿಗೆ ಕಾರಣವಾಗಿದ್ದು ’ಮಾಧ್ಯಮದವರು ಹೇಳಿದ ಮೇಲೆ ಪ್ರಶಸ್ತಿ ಬಂದ ವಿಚಾರ ನಂಗೆ ತಿಳಿಯಿತು. ಸರ್ಕಾರವೇ ಗುರುತಿಸಿ ಪ್ರಶಸ್ತಿ ಕೊಡುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಬಹಳಷ್ಟು ಸಂತೋಷವಾಗಿದೆ. ಈ ಪ್ರಶಸ್ತಿ ಗವಿಸಿದ್ದೇಶ್ವರ ಸ್ವಾಮೀಜಿಗೆ ಅರ್ಪಿಸುತ್ತೇನೆ’ ಎಂದು ಹೇಳುವಾಗ ಅಜ್ಜಿಯ ಸಂಭ್ರಮಕ್ಕೆ ಪಾರವೇ ಇರಲಿಲ್ಲ.

ಶಿವಮೊಗ್ಗದ ಕರ್ನಾಟಕ ಸಂಘ, ಬೆಂಗಳೂರಿನ ಮಿಥಿಕ್ ಸೊಸೈಟಿ, ದಾವಣಗೆರೆಯ ಮೌಲಾನಾ ಆಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ ಸೇರಿದಂತೆ ಹತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆಯಾಗಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಈ ವರ್ಷ ಹೆಚ್ಚುವರಿಯಾಗಿ ಪ್ರಶಸ್ತಿ ನೀಡಲು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಮಾನಿಸಿದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇನ್ನು ಇಸ್ರೋ ಸಂಸ್ಥೆ ಚೇರ್ಮನ್ ಎಸ್ ಸೋಮನಾಥ್ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ಈ ಬಾರಿ 12 ಮಹಿಳೆಯರು, ಒಬ್ಬರು ಮಂಗಳಮುಖಿಗೆ ಪ್ರಶಸ್ತಿ ನೀಡಲಾಗುತ್ತದೆ. ಇನ್ನುಳಿದಂತೆ ಸಿನಿಮಾ ಕ್ಷೇತ್ರದಿಂದ ಹಿರಿಯ ಪೋಷಕ ನಟರಾದ ಡಿಂಗ್ರಿ ನಾಗರಾಜ್ ಹಾಗೂ ಬ್ಯಾಂಕ್ ಜನಾರ್ಧನ್ ಅವರಿಗೆ ಹಾಗೂ ನ್ಯಾಯಾಂಗ ಕ್ಷೇತ್ರದಿಂದ ಜಸ್ಟೀಸ್ ವಿ. ಗೋಪಾಲಗೌಡ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *