ವಿನಾಕಾರಣ ಸಹಕಾರಿ ಸಂಸ್ಥೆ ಗಳಿಗೆ ತೊಂದರೆ ಕೊಟ್ಟರೆ ಹುಷಾರ್….

ಸಿದ್ದಾಪುರ: ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಚಾಲನೆ ನೀಡಿದರು.


ಉದ್ಘಾಟನೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯ ಸಹಕಾರಿ ಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ. ಸಹಕಾರಿ ಸಂಘಗಳಿಂದ‌ ರೈತರ ಸ್ವಾವಲಂಭಿ ಬದುಕಿಗೆ ದಾರಿಯಾಗುತ್ತಿದೆ. ಇಲಾಖೆಯ ಅಧಿಕಾರಿಗಳು ಇಲ್ಲದ ಕಾರಣ ಹೇಳಿ ಸಂಘಗಳಿಗೆ ತೊಂದರೆ ಕೊಟ್ಟರೆ ಸುಮ್ಮನಿರುವುದಿಲ್ಲ ಎಂದ ಅವರು, ಕ್ಯಾದಗಿ ಸೊಸೈಟಿಯಿಂದ ಈ ಭಾಗದ ರೈತರಿಗೆ ಹೆಚ್ಚಿನ ಆರ್ಥಿಕ ಸಹಾಯ ದೊರಕಲಿ. ರೈತರ ಬೇಡಿಕೆಗಳನ್ನು ಪೂರೈಸುತ್ತಿರುವ ಸಂಘ ಇನ್ನು ಹೆಚ್ಚಿನ ಅಭಿವೃದ್ಧಿ ಕಾಣಲು ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರ ತುಂಬಾ ಅಗತ್ಯ. ಜಿಲ್ಲೆಯ ಸಹಕಾರಿ ಕ್ಷೇತ್ರ ಪಾರದರ್ಶಕವಾಗಿ ಅತ್ಯುತ್ತಮ ಕೆಲಸ ಮಾಡುತ್ತಿವೆ. ಸಹಕಾರ ಇಲಾಖೆಯ ಅಧಿಕಾರಿಗಳಿಂದ ಸಂಘಗಳಿಗೆ ತೊಂದರೆಯಾದರೆ ಸಹಿಸುವುದಿಲ್ಲ. ಎರಡು ಮೂರು ವರ್ಷಗಳಿಂದ ಬಾಧಿಸುತ್ತಿರುವ ಎಲೆ ಚುಕ್ಕಿ ಹಾಗೂ ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಔಷಧಿ ಕಂಪನಿಗಳ ಮಾಲಕರನ್ನು ಕರೆದು ರೈತರ ತೋಟಕ್ಕೆ ತೆರಳಿ ಅಧ್ಯಯನ ಮಾಡಿ ಸೂಕ್ತ ಔಷಧಿ ನೀಡಿ ಎಂದು ಸೂಚಿಸಿದ್ದೇನೆ. ಆದಷ್ಟು ಬೇಗ ಈ ರೋಗ ನಿವಾರಣೆಗೆ ಔಷಧಿ ಕಂಡು ಹಿಡಿಯಲಾಗುವುದು ಎಂದರು.


ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ಕ್ಯಾದಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಮಕೃಷ್ಣ ನಾಯ್ಕ, ಸೋವಿನಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಾ ಗೌಡ, ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಸೋವಿನಕೊಪ್ಪ ಸೊಸೈಟಿ ಅಧ್ಯಕ್ಷ ಬಿ.ಆರ್.ನಾಯ್ಕ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಕೆ.ಜಿ.ನಾಗರಾಜ, ಕೆ.ಕೆ.ನಾಯ್ಕ ಸುಂಕತ್ತಿ, ಸಹಕಾರಿ ಸಂಘಗಳ ಉಪನಿಬಂಧಕ ಮಂಜುನಾಥ, ಸಂಘದ ನಿರ್ದೇಶಕರಾದ ಪಿ.ಬಿ.ನಾಯ್ಕ, ರವಿ ನಾಯ್ಕ ಹೆಗ್ಗಾರಕೈ, ವಿ.ಕೆ.ಗೌಡ, ಗಣಪತಿ ನಾಯ್ಕ, ಲಕ್ಷ್ಮಣ ನಾಯ್ಕ, ಭಾರತಿ ಭಟ್, ವಿಜಯ ನಾಯ್ಕ, ನಾರಾಯಣ ಹಸ್ಲರ್, ಸುಬ್ರಾಯ ಹೆಗಡೆ, ಕೆ.ಪಿ.ರಘುಪತಿ, ಗೌರ್ಯ ನಾಯ್ಕ, ರಾಮಚಂದ್ರ ಹೆಗಡೆ, ಮುಖ್ಯ ಕಾರ್ಯನಿರ್ವಾಹಕ ಎಂ.ಎನ್.ಗೌಡ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಜಿ.ಜಿ.ಹೆಗಡೆ ಬಾಳಗೋಡ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಗಣೇಶ ಭಟ್ ಸ್ವಾಗತಿಸಿದರು. ನಿರ್ದೇಶಕ ಪಿ.ಬಿ.ನಾಯ್ಕ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *