ಡಿಸೆಂಬರ್‌ ನಲ್ಲೇ ತಾ.ಪಂ.,ಜಿ.ಪಂ ಚುನಾವಣೆ?

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಸರ್ಕಾರಕ್ಕೆ 1 ತಿಂಗಳ ಗಡುವು ನೀಡಿದ ಹೈಕೋರ್ಟ್

ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಗಡುವು ನೀಡಿದೆ.

High court of Karnataka

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಡಿಲಿಮಿಟೇಶನ್ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಗಡುವು ನೀಡಿದೆ.

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂವಿಧಾನದ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. ಈಗ 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸಬೇಕು. ಇದು ಕೊನೆಯ ಗಡುವು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಪಂಚಾಯತಿ ಚುನಾವಣೆಗೆ ಕ್ಷೇತ್ರ ಪುನರ್ ವಿಂಗಡಣೆ  ಮತ್ತು ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

ಚುನಾವಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರಕ್ಕೆ ಅಂತಿಮವಾಗಿ ಒಂದು ತಿಂಗಳ ಗಡುವು ನೀಡಲಾಗುವುದು ಎಂದು ಹೈಕೋರ್ಟ್ ಹೇಳಿದೆ.

ಸಾಂವಿಧಾನಿಕ ಹೊಣೆಗಾರಿಕೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ಹೈಕೋರ್ಟ್ ಒತ್ತಿ ಹೇಳಿ, ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿದೆ.

ಶಾಸನಬದ್ಧ ಆದೇಶದೊಂದಿಗೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಎರಡು ಬಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು.

ರಾಜ್ಯ ಚುನಾವಣಾ ಆಯೋಗ(ಎಸ್‌ಇಸಿ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಿರಿಯ ಪತ್ರಕರ್ತ Shashidhar Bhatt ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: CM Siddaramaiah

ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತರಾದ ಶಶಿಧರ್ ಭಟ್ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ....

ಪ್ರವಾಹ : ಮಾನವೀಯ ಸ್ಫಂದನಕ್ಕೆ ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ‌ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು...

ಮಳೆ ಬಾಧಿತರಿಗೆ ನೆರವಿನ ಹಸ್ತ ನೀಡಿದ ಶಾಸಕ ಭೀಮಣ್ಣ

ಸಿದ್ದಾಪುರ: ಭಾರಿ ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ ಪರಿಶೀಲನೆ ನಡೆಸಿ...

112 ಉತ್ತರ ಕನ್ನಡದಲ್ಲೇಕೆ ತುಘಲಕ್‌ ದರ್ಬಾರ್?‌

ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು...

ಪುನೀತ್‌ ರಾಜಕುಮಾರ ಆಶ್ರಯಧಾಮದಲ್ಲಿ ನಡೆಯಿತು ಮಂತ್ರ ಮಾಂಗಲ್ಯ ಮದುವೆ

ಸಿದ್ದಾಪುರ: ತಾಲೂಕಿನ ಮೂಗದೂರಿನ ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದವರಿಗೆ ಗುರುವಾರ ಮಂತ್ರ ಮಾಂಗಲ್ಯದ ಮದುವೆ ಮಾಡಲಾಯಿತು. ಮನೆಯವರಿಂದ ತಿರಸ್ಕರಿಸಲ್ಪಟ್ಟು ಮಾನಸಿಕವಾಗಿ ಅಸ್ವಸ್ಥರಾಗಿದ್ದ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *