ವಿಪಕ್ಷ ನಾಯಕನಾಗಿ ಆರ್.ಅಶೋಕ್ ಒಮ್ಮತದ ಆಯ್ಕೆ: ಬಿಜೆಪಿ ಹೈಕಮಾಂಡ್ ‘ಪುಣ್ಯಕೋಟಿ’ ಸಾಮ್ರಾಟ್ ನೇಮಕ ಮಾಡಿದ್ದು ಏಕೆ?

ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

R Ashoka

ಬೆಂಗಳೂರು: ಬಿಜೆಪಿಯಲ್ಲಿ ನನೆಗುದಿಗೆ ಬಿದ್ದಿದ್ದ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಹುದ್ದೆಗಳೆರಡಕ್ಕೂ ಆಯ್ಕೆ ಅಂತಿಮ ಆಗಿರುವುದರಿಂದ ಪಕ್ಷದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ, ವೀರಶೈವ ಲಿಂಗಾಯತ ಸಮುದಾಯ ಪ್ರಭಾವಿ ನಾಯಕ ಬಿ.ವೈ.ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದ್ದರೆ, ವಿಪಕ್ಷ ನಾಯಕನ ಸ್ಥಾನಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಸಾಮ್ರಾಟ್ ಎಂದೇ ಕರೆಯಲ್ಪಡುವ, ಒಕ್ಕಲಿಗರ ಸಮುದಾಯದ ಪ್ರಭಾವಿ ನಾಯಕ ಆರ್. ಅಶೋಕ ಅವರನ್ನು ಇಂದು ಆಯ್ಕೆ ಮಾಡಲಾಗಿದೆ. ಈ ಎರಡು ಆಯ್ಕೆಗಳ ಮೂಲಕ ರಾಜ್ಯದ ಎರಡು ಪ್ರಬಲ ಸಮುದಾಯದವರನ್ನು ಸೆಳೆದು ಪಕ್ಷವನ್ನು ಬಲಗೊಳಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವ ಗಳಿಸುವ ತಂತ್ರ ಅಡಗಿದೆ. ಇನ್ನೊಂದೆಡೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತಷ್ಟು ಬಲ ನೀಡುವ ಉದ್ದೇಶವೂ ಇದೆ ಎನ್ನಲಾಗಿದೆ.

66 ವರ್ಷ ವಯಸ್ಸಿನ  ಅಶೋಕ್  ಆರ್‌ಎಸ್‌ಎಸ್ ಪ್ರಬಲ ವ್ಯಕ್ತಿ ಕರ್ನಾಟಕ ವಿಧಾನಸಭೆಯಲ್ಲಿ ಇಪ್ಪತ್ತಾರನೇ ವಿರೋಧ ಪಕ್ಷದ ನಾಯಕರಾಗಲಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್ 4 ರಂದು ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ 135 ಶಾಸಕರನ್ನು ಹೊಂದಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಎದುರಿಸುವುದು ಅವರಿಗೆ ತಕ್ಷಣದ ಸವಾಲಾಗಿದೆ. ಕಳೆದ ಆರು ತಿಂಗಳಿಂದ  ಖಾಲಿ ಉಳಿದಿದ್ದ ಎರಡು ಹುದ್ದೆಗಳಿಗೆ ನಾಯಕರನ್ನು ನೇಮಕ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಎಲ್ಲಾ ಊಹಾ ಪೋಹಗಳಿಗೂ ತೆರೆ ಎಳೆದಿದೆ.

ಒಮ್ಮತದ ಅಭ್ಯರ್ಥಿಯಾಗಿ  ಅಶೋಕ್ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ, ವಿಪಕ್ಷ ನಾಯಕನಾಗಿ  ಆಯ್ಕೆಯಾದ ನಂತರ, ಹತ್ತೊಂಬತ್ತು ಜೆಡಿ (ಎಸ್) ಶಾಸಕರು ಮತ್ತು ಬಿಜೆಪಿ ಶಾಸಕರ ಜೊತೆಗೂಡಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಅಶೋಕ್ ತಿಳಿಸಿದ್ದಾರೆ.

ನಾನು ಪ್ರತಿಪಕ್ಷದ ನಾಯಕನಾಗಿರಬಹುದು ಆದರೆ ಎಲ್ಲಾ 66 ಬಿಜೆಪಿ ಶಾಸಕರು ನಮ್ಮ ನಾಯಕರು,   ಜೆಡಿ (ಎಸ್) ಎನ್‌ಡಿಎ ಪಾಲುದಾರರಾಗಿರುವುದರಿಂದ ಅದರ 19 ಶಾಸಕರು ಸಹ ನಮ್ಮೊಂದಿಗಿರುತ್ತಾರೆ. ಬಿಎಸ್ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಭ್ರಷ್ಟ ಸರ್ಕಾರವನ್ನು ಬಯಲಿಗೆಳೆಯುತ್ತೇವೆ, ವಿಪಕ್ಷ ನಾಯಕನ ಹುದ್ದೆ “ಮುಳ್ಳಿನ ಹಾದಿ” ಎಂದು ಅವರು ಹೇಳಿದರು.

ಶಿವರಾಮ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಸೇರಿದಂತೆ ಇಬ್ಬರು ಗೈರು ಹಾಜರಾಗಿದ್ದರಿಂದ ಪಕ್ಷದ ಕೇಂದ್ರ ವೀಕ್ಷಕರಾದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅವರು ಆರ್ ಅಶೋಕ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.

ವೀರಶೈವ ಲಿಂಗಾಯತ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದ ನಂತರ,  ವಿಪಕ್ಷ ನಾಯಕನ ಸ್ಥಾನಕ್ಕೆ ಒಕ್ಕಲಿಗ ಅಥವಾ ಹಿಂದುಳಿದ ವರ್ಗದ ನಾಯಕರನ್ನು ಆಯ್ಕೆ ಮಾಡುತ್ತದೆ ಎಂಬ ಊಹಾಪೋಹಗಳು ದಟ್ಟವಾಗಿದ್ದವು.

ಒಕ್ಕಲಿಗ ಪ್ರಾಬಲ್ಯವಿರುವ ಹಳೆ ಮೈಸೂರು ಪ್ರಾಂತ್ಯದಲ್ಲಿ, ಈ ಸಮುದಾಯಕ್ಕೆ ಪ್ರಾತಿನಿಧ್ಯವಿಲ್ಲವೆಂಬ ಸಂದೇಶ ಹೋದರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಬಹುದೆಂಬ ಭಯವೂ ಈ ಆಯ್ಕೆಯ ಹಿಂದಿದೆ. ಪಕ್ಷದ ಅಧ್ಯಕ್ಷರಾಗಿ ತಮ್ಮ ಮಗ ವಿಜಯೇಂದ್ರ ಅವರನ್ನು ನೇಮಿಸಿಕೊಳ್ಳುವಲ್ಲಿ ಯಶಸ್ವಿಯಾದ ಯಡಿಯೂರಪ್ಪ, ಪಕ್ಷದಲ್ಲಿ ಮೇಲುಗೈ ಸಾಧಿಸಿದ್ದರು. ವಿರೋಧ ಪಕ್ಷದ ನಾಯಕನ ಆಯ್ಕೆ ವಿಷಯ ಬಂದಾಗ, ತಾವು ಹೇಳಿದಂತೆ ಕೇಳುವ ವ್ಯಕ್ತಿಯನ್ನೇ ಆ ಸ್ಥಾನಕ್ಕೆ ಕೂರಿಸಬೇಕೆಂಬ ಇರಾದೆ ಅವರಲ್ಲಿ ಸಹಜವಾಗಿಯೇ ಇತ್ತು.

ಜಾತಿ ರಾಜಕಾರಣದ ಮೇಲೆ ಬಿಜೆಪಿ ಎಂದಿಗೂ ರಾಜಕೀಯ ಮಾಡಿಲ್ಲ, ಜನರು ನಮಗೆ ಹಿಂದುತ್ವದ ಬ್ರಾಂಡ್ ನೀಡಿದ್ದಾರೆ, ನಾವು ಒಪ್ಪಿಕೊಂಡಿದ್ದೇವೆ ಮತ್ತು ಆ ಬ್ರ್ಯಾಂಡ್‌ನೊಂದಿಗೆ ಮುಂದುವರಿಯುತ್ತೇವೆ,  ಆದರೆ ಸಾಮಾಜಿಕ ನ್ಯಾಯವನ್ನು ಅನುಸರಿಸುತ್ತೇವೆ.  ಶಾಸಕರ ಅಭಿಪ್ರಾಯವನ್ನು ಪಡೆದ ನಂತರ ಕೋರ್ ಕಮಿಟಿ ರಾಷ್ಟ್ರೀಯ ನಾಯಕರು ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಅಶೋಕ ಹೇಳಿದರು.

ಸಚಿವರಾಗಿ ಹಲವು ಖಾತೆ ನಿಭಾಯಿಸಿದ್ದರೂ ಅಶೋಕ ಅವರು, ಇಡೀ ರಾಜ್ಯದ ಒಕ್ಕಲಿಗ ನಾಯಕರಾಗಿ ಹೊರಹೊಮ್ಮಿದವರಲ್ಲ. ಈಗ ಪ್ರತಿನಿಧಿಸುತ್ತಿರುವ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಬಿಟ್ಟರೆ, ಅದರಾಚೆಗೆ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಂಡವರೂ ಅಲ್ಲ. ‘ಹೊಂದಾಣಿಕೆ’ ರಾಜಕಾರಣದ ಅಪವಾದವನ್ನೂ ಬಿಜೆಪಿ ನಾಯಕರೇ ಅವರ ವಿರುದ್ಧ ಹೊರಿಸಿದ್ದೂ ಇದೆ.

ಇಷ್ಟೆಲ್ಲ ಇದ್ದರೂ, ಪಕ್ಷದ ವರಿಷ್ಠರ ನಿರ್ದೇಶನದ ಮೇರೆಗೆ ವೀಕ್ಷಕರು ಹೊತ್ತು ತಂದ ಹೆಸರು ಅಶೋಕ ಅವರೊಬ್ಬರದ್ದೇ ಆಗಿತ್ತು, ಅಶೋಕ್ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜೊತೆ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್  ನಡೆಸಿಕೊಂಡು ಬರುತ್ತಿದ್ದಾರೆ ಎಂಬ ವಿಷಯ ಬಿಜೆಪಿ ಹೈಕಮಾಂಡ್ ಗೆ ತಿಳಿದಿದೆ. ಆದರೆ ಅಶೋಕ್ ಯಾರಿಗೂ ಉಪದ್ರವ ನೀಡದ ‘ಪುಣ್ಯಕೋಟಿ’ ಸ್ವಭಾವದ ನಾಯಕ ಎಂದರಿತಿರುವ ಹೈಕಮಾಂಡ್ ಅವರನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ನೇಮಕ ಮಾಡಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *