ಪ್ರಧಾನಿ ಮೋದಿ ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಹೋಗಬಾರದಿತ್ತು’

ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ  ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

modipm

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ  ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೀರ್ತಿ ಆಜಾದ್ ಅವರು, “ಡ್ರೆಸ್ಸಿಂಗ್ ರೂಮ್ ಯಾವುದೇ ತಂಡದ ಪವಿತ್ರ ಸ್ಥಳವಾಗಿದೆ. ಐಸಿಸಿ ಈ ಕೊಠಡಿಗಳಿಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶಿಸಲು ಅನುಮತಿಸುವುದಿಲ್ಲ. ಹೀಗಾಗಿ ಪ್ರಧಾನಿ ಮೋದಿ ಅವರು ಖಾಸಗಿ ಸಂದರ್ಶಕರ ಭೇಟಿ ಪ್ರದೇಶದಲ್ಲಿ, ಡ್ರೆಸ್ಸಿಂಗ್ ರೂಮ್ ಹೊರಗೆ ತಂಡವನ್ನು ಭೇಟಿಯಾಗಬೇಕಿತ್ತು. ನಾನು ಇದನ್ನು ಒಬ್ಬ ಕ್ರೀಡಾಪಟುವಾಗಿ ಹೇಳುತ್ತೇನೆ. ರಾಜಕಾರಣಿಯಾಗಿ ಅಲ್ಲ ಎಂದಿದ್ದಾರೆ.

“ನರೇಂದ್ರ ಮೋದಿ ಅವರು ತಮ್ಮ ಬೆಡ್ ರೂಮ್, ಡ್ರೆಸ್ಸಿಂಗ್ ರೂಮ್ ಅಥವಾ ಟಾಯ್ಲೆಟ್‌ನಲ್ಲಿ ತಮ್ಮ ಬೆಂಬಲಿಗರು ಬಂದು ಸಾಂತ್ವನ ಹೇಳಲು ಅಥವಾ ಅಭಿನಂದಿಸಲು ಅನುಮತಿಸುತ್ತಾರೆಯೇ? ಕ್ರೀಡಾ ಪಟುಗಳು ರಾಜಕಾರಣಿಗಳಿಗಿಂತ ಹೆಚ್ಚು ಶಿಸ್ತುಬದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಪ್ರಧಾನಿ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

“ಕೊನೆಯದಾಗಿ, ವ್ಯಕ್ತಿ ಮತ್ತು ಅವರ ತಂಡ ಭಾರತಕ್ಕಾಗಿ ಇದನ್ನು ಮಾಡಿದೆ, 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರನ್ನು ಆಹ್ವಾನಿಸಲಾಗಿಲ್ಲ. ಈಗ ಹೇಳಿ ಯಾರು ರಾಜಕೀಯ ಮಾಡುತ್ತಿದ್ದಾರೆ?”

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *