ಶಿರಸಿ ಬಂಡಲ್‌ ಬಳಿ ಅಪಘಾತ ಮದುವೆಗೆ ಬಂದ ೫ ಜನರ ದುರ್ಮರಣ

ಕಾರು-ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು…

car-ksrtc

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದ ಮಂಗಳೂರಿನ ರಾಮಕೃಷ್ಣ ಬಾಬುರಾವ್ (71), ವಿದ್ಯಾಲಕ್ಷ್ಮೀ ರಾಮಕೃಷ್ಣ(65), ಪುಷ್ಪಾ ಮೋಹನ ರಾವ್ (62), ಸುಹಾಸ್ ಗಣೇಶ ರಾವ್ (30), ಹಾಗೂ ಚೆನ್ನೈನ ಅರವಿಂದ(30) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರೆ. ಮತ್ತೊಬ್ಬರು ಅವರ ಸ್ನೇಹಿತರು ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *