d.25 ಅಖಿಲ ಹವ್ಯಕ ಮಹಾಸಭೆಯ ಪ್ರತಿಬಿಂಬ ಕಾರ್ಯಕ್ರಮ


ಸಿದ್ದಾಪುರ
ಅಖಿಲ ಹವ್ಯಕ ಮಹಾಸಭೆಯು ಹವ್ಯಕರಿಂದ,ಹವ್ಯಕರಿಗಾಗಿ,ಹವ್ಯಕರಿಗೋಸ್ಕರ ತಾಲೂಕಿನ ಹೇರೂರು ಹಾಗೂ ಸುತ್ತಲಿನ ಪ್ರಾಂತ್ಯಗಳ ಹವ್ಯಕ ಪ್ರತಿಭೆಗಳಿಗಾಗಿ ಪ್ರತಿಬಿಂಬ ಎನ್ನುವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿ.೨೫ರಂದು ಹೇರೂರಿನ ಶ್ರೀ ಸಿದ್ಧಿವಿನಾಯಕ ಸಭಾಭವನದಲ್ಲಿ ಆಯೋಜಿಸಿದೆ ಎಂದು ಹವ್ಯಕ ಮಹಾಸಭೆಯ ನಿರ್ದೇಶಕ ಜಿ.ಎಂ.ಭಟ್ಟ ಕಾಜಿನಮನೆ ತಿಳಿಸಿದರು.


ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿ ಡಿ.೨೫ರ ಬೆಳಿಗ್ಗೆ ೯.೩೦ಕ್ಕೆ ಶಿ.ಪ್ರ.ಸಮಿತಿಯ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ದೊಡ್ಮನೆ ಉದ್ಘಾಟಿಸುವರು. ಅಖಿಲ ಹವ್ಯಕ ಮಹಾಸಭೆ ಉಪಾಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆವಹಿಸುವರು. ಅತಿಥಿಗಳಾಗಿ ಕೆ.ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತಿç ಪಾಲ್ಗೊಳ್ಳುವರು. ಕಿಬ್ಬಳ್ಳಿ ಮ.ಗ.ಶಿ.ಗ್ರಾ. ಸಂಸ್ಥೆ ಅಧ್ಯಕ್ಷ ನಾಗಪತಿ ಭಟ್ಟ ಮಿಳಗಾರ,ಹೆಗ್ಗರಣಿ ವಿ.ಶಿ.ಸಂಸ್ಥೆ ಅಧ್ಯಕ್ಷ ಎನ್.ಆರ್.ಭಟ್ಟ ದರೆ, ಶ್ರೀಮನ್ನೆಲೆಮಾವು ಮಠದ ಅಧ್ಯಕ್ಷ ಜಿ.ಎಂ.ಹೆಗಡೆ ಹೆಗ್ನೂರು, ನೆಲೆಮಾವು ಸೇ.ಸ.ಸಂಘದ ಅಧ್ಯಕ್ಷ ಜಿ.ಆಯ್.ಹೆಗಡೆ ಉಂಬಳಮನೆ, ಹೆಗ್ಗರಣಿ ಸೇ.ಸ.ಸಂ.ದ ಅಧ್ಯಕ್ಷ ಎಂ.ಎಲ್.ಭಟ್ಟ ಉಂಚಳ್ಳಿ, ಹೇರೂರು ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಧ್ಯಕ್ಷ ನರಸಿಂಹಮೂರ್ತಿ ಹೆಗಡೆ ತ್ಯಾರ್ಗಲ್, ಸರಕುಳಿ ಜಗದಾಂಬಾ ಪ್ರೌಢಶಾಲೆ ಅಧ್ಯಕ್ಷ ಎಂ.ಜಿ.ಹೆಗಡೆ ತ್ಯಾರ್ಗಲ್ ಉಪಸ್ಥಿತರಿರುವರು.‌


ಬೆಳಿಗ್ಗೆ ೧೦ರಿಂದ ಸ್ಪರ್ಧಾ ಸೌರಭ ನಡೆಯಲಿದ್ದು ೬ ವರ್ಷದ ಒಳಗಿನವರಿಗೆ ಛದ್ಮವೇಷ,ಶ್ಲೋಕಪಠಣ,ಚೆಂಡು ಎಸೆತ ಸ್ಪರ್ಧೆಗಳು, ೭ರಿಂದ೧೨ ವರ್ಷದವರಿಗೆ ಭಗವದೀತೆ(೧೦ನೇ ಅಧ್ಯಾಯದ ಮೊದಲ ೧೫ ಶ್ಲೋಕಗಳು),ಚಿತ್ರಕಲೆ( ಹಬ್ಬ),ಕೆರೆದಡ ಸ್ಪರ್ಧೆ,೧೩ರಿಂದ ೧೮ ವರ್ಷದವರಿಗೆ ಭಾವಗೀತೆ,ಆಶುಭಾಷಣ,ಸಂಗೀತ ಕುರ್ಚಿ ಸ್ಪರ್ಧೆಗಳು, ಸಾಮಾನ್ಯ ವಿಭಾಗ(೧೮ವರ್ಷ ಮೆಲ್ಪಟ್ಟು) ಹವಿ-ರುಚಿ(ಹಲ್ವಾ),ಸಂಪ್ರದಾಯಗೀತೆ(ಪ್ರತಿ ತಂಡದಲ್ಲಿ ೩ ಜನಕ್ಕೆಅವಕಾಶ) ರಂಗೋಲಿ,ಆರತಿತಟ್ಟೆ,ಪಾಯಸ ಕುಡಿಯುವದು, ಹಗ್ಗಜಗ್ಗಾಟ(೬ಜನರ ತಂಡ) ಮುಂತಾದ ಸ್ಪರ್ಧೆಗಳು ನಡೆಯಲಿವೆ. ಸಂಜೆ ೪ರಿಂದ ಸಂಸ್ಕಾರ ಮತ್ತು ಸಂಸ್ಕೃತಿ ವಿಷಯದ ಕುರಿತು ವಿ| ವಿಶ್ವನಾಥ ವಿ.ಭಟ್ ನರ‍್ಗಾನು, ಸನಾತನ ವೈದಿಕ ಧರ್ಮ ವಿಷಯದ ಕುರಿತು ವಿ| ಮಂಜುನಾಥ ಜಿ.ಭಟ್ಟ ಹೇರೂರು ಉಪನ್ಯಾಸ ನೀಡುವರು.


ಸಂಜೆ ೫ರಿಂದ ಸಮಾರೋಪ ನಡೆಯಲಿದ್ದು ಶ್ರೀಮನ್ನೆಲೆಮಾವು ಮಠದ ಶ್ರೀ ಮಾದವಾನಂದ ಭಾರತೀ ಶ್ರೀಗಳು ದಿವ್ಯ ಉಪಸ್ಥಿತಿ ವಹಿಸಲಿದ್ದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭ್ಯಾಗತರಾಗಿ ಪಾಲ್ಗೊಳ್ಳುವರು. ಬಾಳೇಸರ ಸೇ.ಸ.ಸಂಘದ ಅಧ್ಯಕ್ಷ ಸಿ.ಎನ್.ಹೆಗಡೆ ತಂಗರ‍್ಮನೆ, ಕಂಚಿಕೈ ಸೇ.ಸ.ಸಂಘದ ಅಧ್ಯಕ್ಷ ಎಂ.ವಿ.ಹೆಗಡೆ, ನಿಲ್ಕುಂದ ಗ್ರಾಪಂ ಅಧ್ಯಕ್ಷ ರಾಜಾರಾಮ ಆರ್.ಹೆಗಡೆ ಬೆಳೆಕಲ್ಲು ಉಪಸ್ಥಿತರಿರುವರು ಎಂದರು.
ಈ ಪ್ರತಿಬಿಂಬ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಪಡೆದವರಿಗೆ ಬೆಂಗಳೂರಿನಲ್ಲಿ ನಡೆಯುವ ಮೆಗಾ ಸ್ಪರ್ಧೆಗೆ ಅವಕಾಶವಿದೆ. ಸ್ಪರ್ಧೆಗಳಿಗೆ ಹೆಸರು ನೊಂದಾಯಿಸುವವರು ಡಿ.೨೫ರ ಒಳಗೆ ೯೧೪೮೪ ೫೯೧೯೧,೮೦೮೮೫೭೪೧೮೧, ೮೭೬೨೬೩೨೮೬೭ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.
ರಾಷ್ಟçಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜಿ.ಜಿ.ಹೆಗಡೆ ಬಾಳಗೋಡ ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *