ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್‌ ಗೆ ಖರ್ಗೆ ಪ್ರಶ್ನೆ

https://www.youtube.com/watch?v=fjUmV7ap5h4&t=22s

ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Mallikarjuna Kharge

ನವದೆಹಲಿ: ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಸಭಾ ಅಧ್ಯಕ್ಷರೂ ಆಗಿರುವ ಧನಕರ್ ಅವರು, ತಾನು ರೈತ ಮತ್ತು ‘ಜಾಟ್’ (ಅವರ ಜಾತಿ) ಎಂಬ ಕಾರಣಕ್ಕೆ ತಮ್ಮ ಬಗ್ಗೆ ಮಿಮಿಕ್ರಿ ಮಾಡಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದರು. ಆಡಳಿತಾರೂಢ ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಯವರ ಕೆಲಸ. ಆದರೆ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.

“ರಾಜ್ಯಸಭೆಯಲ್ಲಿ ಆಗಾಗ ಮಾತನಾಡಲು ನನಗೆ ಅವಕಾಶ ನೀಡುವುದಿಲ್ಲ. ಆದರೆ ನಾನು ದಲಿತ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ ಎಂದು ಹೇಳಬೇಕೇ?” ಎಂದು ಪ್ರಶ್ನಿಸಿದರು. ಸದನದ ಒಳಗೆ ಜಾತಿಯ ಬಗ್ಗೆ ಮಾತನಾಡುವ ಮೂಲಕ ಹೊರಗಿನವರನ್ನು ಪ್ರಚೋದಿಸಬಾರದು ಎಂದಿದ್ದಾರೆ.

ಸಾಂವಿಧಾನಿಕ ಉನ್ನತ ಸ್ಥಾನದಲ್ಲಿರುವವರು ತಮ್ಮ ಜಾತಿಯ ಬಗ್ಗೆ ಮಾತನಾಡುತ್ತಿರುವುದು ಅತ್ಯಂತ ದುಃಖಕರ ವಿಚಾರ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *