covid 19 scam-ಬಸವರಾಜ್‌ ಯತ್ನಾಳ್‌ ಹೊಸ ಬಾಂಬ್!

ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ಅವ್ಯವಹಾರದ ದಾಖಲೆ ಬಿಡುಗಡೆ: ಬಿಜೆಪಿಗೆ ಯತ್ನಾಳ್ ಎಚ್ಚರಿಕೆ

ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್…

Basanagouda patil yatnal and BJP high command leaders

ಬೆಂಗಳೂರು: ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಬಿಜೆಪಿಯ ಫೈರ್ ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದಿದ್ದಾರೆ.

ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ.

ಜನವರಿ 5ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಕೇಸ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಅವರ ನಂತರ ಅಪ್ಪಾಜಿಯದ್ದೇ ಹೊರ ತೆಗೆಯುತ್ತೇನೆ ಎಂದು ಹೇಳುವ ಮೂಕಲಕ ಪರೋಕ್ಷವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ತನಿಖೆಗೆ ಒತ್ತಾಯಿಸುವುದಾಗಿ ಎಂದು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *