‘ಬಿಜೆಪಿಯಿಂದ ಶೀಘ್ರದಲ್ಲೇ ಲೋಕಸಭಾ ಅಭ್ಯರ್ಥಿಯಾಗಿ ಶ್ರೀರಾಮನ ಹೆಸರು ಘೋಷಣೆ’!

ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ  ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ.

Representational image

ನವದೆಹಲಿ: ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ  ನಡೆಯಲಿದೆ. ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಒಂದು ವಾರದ ಮೊದಲು ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದೆ.

ಜನವರಿ 17 ರಂದು ಬಲರಾಮನ ಮೂರ್ತಿ ಅಯೋಧ್ಯೆಗೆ ತಲುಪಲಿದೆ. ಅದೇ ದಿನ, ಸರಯೂ ನದಿಯ ನೀರನ್ನು ಕಲಶದಲ್ಲಿ ತೆಗೆದುಕೊಳ್ಳಲಾಗುತ್ತದೆ. ಜನವರಿ 18 ರಂದು ಗಣೇಶ ಪೂಜೆ ನಡೆಯಲಿದೆ. ಜನವರಿ 19 ರಂದು ಹೋಮ ನಡೆಯಲಿದೆ. ಜನವರಿ 20 ರಂದು ವಾಸ್ತು ಶಾಂತಿ ಹಾಗೂ 21 ರಂದು ರಾಮನ ಮೂರ್ತಿಗೆ ಅಭಿಷೇಕ ಜರುಗಲಿದೆ.

ಈ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ. ಬಿಜೆಪಿ ಪಕ್ಷವು ರಾಮಮಂದಿರದ ಉದ್ಘಾಟನೆಯನ್ನು ಸ್ವಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿದೆ. ಶೀಘ್ರದಲ್ಲೇ ರಾಮನನ್ನು ಲೋಕಸಭಾ ಅಭ್ಯರ್ಥಿಯಾಗಿ ಘೋಷಿಸುವುದು ಮಾತ್ರ ಉಳಿದಿದೆ. ಅಯೋಧ್ಯೆ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಶುದ್ಧತೆ ಇಲ್ಲ, ಕೇವಲ ರಾಜಕೀಯ ಉದ್ದೇಶ ತುಂಬಿದೆ ಎಂದು ಸಂಜಯ್ ರಾವುತ್ ವಾಗ್ದಾಳಿ ನಡೆಸಿದರು.

ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಗೆ ರಾಮನನ್ನು ಲೋಕಸಭೆ ಅಭ್ಯರ್ಥಿ ಎಂದು ಘೋಷಿಸುವುದೊಂದೇ ಬಾಕಿ ಎಂದರು. ಸಂಜಯ್ ರಾವತ್ ಅವರು ಈ ಹಿಂದೆಯೂ ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಟೀಕೆ ಮಾಡಿದ್ದರು. ಈ ಸಮಾರಂಭಕ್ಕೂ ದೇಶಕ್ಕೂ ಯಾವುದೇ ಸಂಬಂಧವಿಲ್ಲ, ಇದು ಕೇವಲ ಬಿಜೆಪಿ ಕಾರ್ಯಕ್ರಮ ಎಂದು ಹೇಳಿದ್ದರು. ಬಿಜೆಪಿ ಕಾರ್ಯಕ್ರಮಗಳು ಮುಗಿದ ನಂತರವೇ ಉದ್ಧವ್ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *