ಗುರುದಕ್ಷಿಣೆಯಾಗಿ ಬೈಕ್‌ ಗಿಫ್ಟ್..

ಶಿವಮೊಗ್ಗ: 16 ವರ್ಷ ಊರಿನ ಸೇವೆ ಮಾಡಿದ ಶಿಕ್ಷಕನಿಗೆ ಗುರುದಕ್ಷಿಣೆಯಾಗಿ ಬೈಕ್ ನೀಡಿದ ಗ್ರಾಮಸ್ಥರು!

16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ.

​ Teacher Santosh Kanchan poses with the bike gifted to him by the residents of Valuru village in Sagar taluk.

ಶಿವಮೊಗ್ಗ: 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತೋಷ್ ಕಾಂಚನ್ ಎಂಬ ಶಿಕ್ಷಕ 16 ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು. ಅವರ ಈ ಸೇವೆಗಾಗಿ ಗ್ರಾಮಸ್ಥರು ಗುರುದಕ್ಷಿಣೆಯಾಗಿ ಬೈಕ್ ನೀಡಿದ್ದಾರೆ.

ಈ‌ ಊರಿಂದ ಮುಖ್ಯರಸ್ತೆಗೆ ತಲುಪಬೇಕೆಂದರೆ 6-7 ಕಿಮೀ ಕಾಲ್ನಡಿಗೆಯಲ್ಲೇ ಬರಬೇಕಿತ್ತು. ಹೀಗಾಗಿ ಗ್ರಾಮದ ಸ್ಥಿತಿ‌ ಅರಿತ ಸಂತೋಷ್ ಅವರು ಈ ಹಿಂದೆ ವಿದ್ಯಾರ್ಥಿಗಳು ಹಾಗೂ ಊರಿನವರಿಗಾಗಿ ಬೈಕ್ ಖರೀದಿಸಿದ್ದರು.

ಈ ಬೈಕ್ ನಲ್ಲಿ ಕೇವಲ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ಊರಿನಲ್ಲಿ ಯಾರಾದರೂ ಅನಾರೋಗ್ಯಕ್ಕೀಡಾದರೆ ಸಹಾಯ ಮಾಡುತ್ತಿದ್ದರು. ಸಂತೋಷ್ ಅವರ ಈ ಬೈಕ್ ನ್ನು ಗ್ರಾಮಸ್ಥರು ವಳೂರು ಆ್ಯಂಬುಲೆನ್ಸ್ ಎಂದೂ ಹೆಸರಿಟ್ಟಿದ್ದರು.

ಅಂದ ಹಾಗೆ ವಳೂರು ಗ್ರಾಮದಲ್ಲಿರುವುದು ಒಟ್ಟು 100 ಜನ ಕಾಡುಕುಣಬಿ ಗ್ರಾಮಸ್ಥರು. ಕೊಡಚಾದ್ರಿ ತಟದಲ್ಲಿರುವ ವಳೂರಿಗೆ ಯಾವುದೇ ವಾಹನ ವ್ಯವಸ್ಥೆಯಿರಲಿಲ್ಲ. ಮುಖ್ಯರಸ್ತೆಗೆ ತಲುಪಬೇಕೆಂದರೆ 6-7 ಕಿಲೋ ಮೀಟರ್ ಕಾಲ್ನಡಿಗೆಯಲ್ಲೇ ಹೋಗಬೇಕಿತ್ತು.

ಈ ನಡುವೆ 2007ರಲ್ಲಿ ವಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಕರಾಗಿ ಸಂತೋಷ್ ಅವರು ನೇಮಕಗೊಂಡಿದ್ದರು. ಸಂತೋಷ್ ಅವರು ಭಾನುವಾರ ಕೂಡ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದರು, ಅಲ್ಲದೆ, ಗ್ರಾಮಸ್ಥರ ಕುರಿತು ಸಮರ್ಪಣಾ ಮನೋಭಾವ ಹೊಂದಿದ್ದರು. ಇದರಿಂದ ಗ್ರಾಮಸ್ಥರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಈ ಪ್ರೀತಿಯಿಂದಲೇ ಸಂತೋಷ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಿ, ಬೈಕ್ ನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಹಿಂದೆ ಗ್ರಾಮಕ್ಕೆ ವಿದ್ಯುತ್, ಮೊಬೈಲ್, ಸಾರಿಗೆ ಸಂಪರ್ಕ ಇರಲಿಲ್ಲ. 2012ರಲ್ಲಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. 10-12 ವರ್ಷಗಳಿಂದ ಮಕ್ಕಳಿಗೆ ಪಾಠ ಮಾಡಿದ್ದೇನೆ. ಇದು ಕುಗ್ರಾಮವಾಗಿದ್ದು, ಗ್ರಾಮದಲ್ಲಿ ಬಹಳ ಚಳಿ ಹಾಗೂ ಜಿಗಣೆಗಳ ಕಾಟವಿದೆ. ಇಲ್ಲಿನ ಜನರು ಆರ್ಥಿಕವಾಗಿ ಸದೃಢವಾಗಿಲ್ಲ. ಕುಣಬಿ ಬುಡಕಟ್ಟಿಗೆ ಸೇರಿದವರಾಗಿದ್ದಾರೆ. ಮಧ್ಯಾಹ್ನ ಊಟ ಮುಗಿಸಿಕೊಂಡು ಮಕ್ಕಳು ಶಾಲೆಗೆ ಬರುತ್ತಿದ್ದರು. ಸಂಜೆ ವೇಳೆ ನಾನು ಪಾಠ ಮಾಡುತ್ತಿದ್ದೆ. ಇಲ್ಲಿನ ಮಕ್ಕಳು ಸಾಕಷ್ಟು ಬುದ್ಧಿವಂತರು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.

ಸ್ಫರ್ಧೆಗಳಲ್ಲಿ ಭಾಗವಹಿಸಲು ಶಿವಮೊಗ್ಗಕ್ಕೆ ತೆರಳಬೇಕಾದರೆ, ದಟ್ಟ ಅರಣ್ಯದಲ್ಲಿ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಇತ್ತು. ಹೀಗಾಗಿ ನಾನು ಬೈಕ್ ಖರೀದಿ ಮಾಡಿದ್ದೆ. ಗ್ರಾಮದಲ್ಲಿ ಬೇರೆ ಯಾರ ಬಳಿಯೂ ಬೈಕ್ ಇಲ್ಲ. ಅವರಿಗೆ ಖರೀದಿಸಲು ಸಾಧ್ಯವೂ ಇಲ್ಲ. ನನ್ನ ಸೇವೆಯನ್ನು ಗ್ರಾಮಸ್ಥರು ಸ್ಮರಿಸಿದ್ದಾರೆ. ಹೀಗಾಗಿ ನನಗೆ ಬೈಕ್ ನೀಡಿದ್ದಾರೆಂದು ಸಂತೋಷ್ ಅವರು ಹೇಳಿದ್ದಾರೆ.

ಈ ಗ್ರಾಮಸ್ಥರು ಅರಣ್ಯ ಆಧಾರಿತ ಉತ್ಪನ್ನಗಳ ಮೇಲೆ ಅವಲಂಬಿತರಾಗಿದ್ದಾರೆ. ಬೀಳ್ಕೊಡುಗೆ ಕಾರ್ಯಕ್ರಮ ಬೇಡ ಎಂದು ಹೇಳಿದ್ದೆ. ಆದರೆ, ಅದನ್ನು ಅವರು ಒಪ್ಪದೆ ಕಾರ್ಯಕ್ರಮ ಆಯೋಜಿಸಿ, ಆಹ್ವಾನ ನೀಡಿದ್ದರು. ನನಗೆ ಬೈಕ್ ಕೊಡುತ್ತಾರೆಂದು ನಿರೀಕ್ಷಿಸಿರಲಿಲ್ಲ. ಅವರ ಪ್ರೀತಿ ಹಾಗೂ ವಾತ್ಸಲ್ಯಕ್ಕೆ ನಾನು ಎಂದಿಗೂ ಚಿರಋಣಿ ಎಂದು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *