

ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಶುಕ್ರವಾರ ಖಂಡಿಸಿದ್ದಾರೆ.


ನವದೆಹಲಿ: ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ಶುಕ್ರವಾರ ಖಂಡಿಸಿದ್ದಾರೆ.
ಇಂದು ಈ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.


ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿರುವ ದೇವೇಗೌಡ, ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.
ಬಿಜೆಪಿ ಜೊತೆಗಿನ ಮೈತ್ರಿಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






