

ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ
ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ….


ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
“ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳಿಂದಾಗಿ, ನಾನು ಪಂಜಾಬ್ ರಾಜ್ಯಪಾಲರ ಹುದ್ದೆಗೆ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಅಂಗೀಕರಿಸಿ” ಎಂದು ಪುರೋಹಿತ್ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಪುರೋಹಿತ್ ಅವರು ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.


ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿಯು ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳನ್ನು ಉಳಿಸಿಕೊಂಡ ಕೆಲವೇ ದಿನಗಳ ನಂತರ ಪರೋಹಿತ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.
ಮೇಯರ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ಗಳನ್ನು ಟ್ಯಾಂಪರಿಂಗ್ ಮಾಡಿದ್ದಾರೆ ಎಂದು ಕಾಂಗ್ರೆಸ್-ಎಎಪಿ ಮೈತ್ರಿ ಆರೋಪಿಸಿತ್ತು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






