ಮೋದಿ (ಸುಳ್ಳ) ಡೂಪ್ಲಿಕೇಟ್‌ ಓಬಿಸಿ… ರಾಹುಲ್‌ ಗಂಭೀರ ಆರೋಪ

ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು..

rahul-g

ಜಾರಸುಗುಡ: ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

ಒಡಿಶಾದ ಜಾರಸುಗುಡದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮೂರನೇ ಮತ್ತು ಮುಕ್ತಾಯದ ದಿನದಂದು ಸಂಕ್ಷಿಪ್ತ ಭಾಷಣ ಮಾಡಿದ ರಾಹುಲ್ ಗಾಂಧಿ, ಮೋದಿ ಅವರು ಮೇಲ್ಜಾತಿಗೆ ಸೇರಿದ ಕುಟುಂಬದಲ್ಲಿ ಜನಿಸಿದರು. ಆದರೆ ಮೋದಿ, ತಾವು ಒಬಿಸಿ ಎಂದು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಮೋದಿ, 2000ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಬಿಸಿ ಪಟ್ಟಿಗೆ ಸೇರಿಸಲ್ಪಟ್ಟ ತೇಲಿ ಜಾತಿಯ ಕುಟುಂಬದಲ್ಲಿ ಜನಿಸಿದವರು. ಆದ್ದರಿಂದ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದರು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಒಬಿಸಿಗಳೊಂದಿಗೆ ಕೈಕುಲುಕುವುದಿಲ್ಲ. ಆದರೆ ಕೋಟ್ಯಾಧಿಪತಿಗಳನ್ನು ಅಪ್ಪಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಬಿಳಿ ಟೀ ಶರ್ಟ್ ಧರಿಸಿದ್ದ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಇಂದು ಇಲ್ಲಿನ ಹಳೆ ಬಸ್ ನಿಲ್ದಾಣದಿಂದ ಯಾತ್ರೆಯನ್ನು ಪುನರಾರಂಭಿಸಿದರು. ಅವರ ಜೊತೆ ಎಐಸಿಸಿ ನಾಯಕ ಅಜೋಯ್ ಕುಮಾರ್ ಮತ್ತು ಒಪಿಸಿಸಿ ಅಧ್ಯಕ್ಷ ಶರತ್ ಪಟ್ಟನಾಯಕ್ ಇದ್ದರು. ಯಾತ್ರೆಯು ಇಂದು ಮಧ್ಯಾಹ್ನ ಒಡಿಶಾದಿಂದ ಛತ್ತೀಸ್‌ಗಢವನ್ನು ಪ್ರವೇಶಿಸಲಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *