ಮೋದಿ ಅಲ್ಲ.. ಶಾರುಖ್ ಕಾರಣ’: ಮತ್ತೆ ಪ್ರಧಾನಿ ಮೋದಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ!

‘ಭಾರತದ ನಾವಿಕರ ಬಿಡುಗಡೆಗೆ ಮೋದಿ ಅಲ್ಲ.. ಶಾರುಖ್ ಕಾರಣ’: ಮತ್ತೆ ಪ್ರಧಾನಿ ಮೋದಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ!

ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ‘ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ’ ಎಂದು ಹೇಳುವ ಮೂಲಕ ಮತ್ತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

subramanian-swamy

ನವದೆಹಲಿ: ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ‘ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ’ ಎಂದು ಹೇಳುವ ಮೂಲಕ ಮತ್ತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

ಬೇಹಗಾರಿಕೆಯ ಆರೋಪದ ಹಿನ್ನೆಲೆಯಲ್ಲಿ ಮರಣ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾ ಪಡೆಯ ಮಾಜಿ ಯೋಧರನ್ನು (Indian Navy Veterans) ಭಾರತಕ್ಕೆ ವಾಪಸ್ ಕರೆ ತರುವಲ್ಲಿ ಕೇಂದ್ರ ಸರ್ಕಾರ (Central Government) ಯಶಸ್ವಿಯಾಗಿದೆ. ಪ್ರಧಾನಿ ಮೋದಿ ಅವರು ವೈಯಕ್ತಿಕ ವರ್ಚಸ್ಸಿನಿಂದಾಗಿಯೇ ಮಾಜಿ ಯೋಧರನ್ನು ರಕ್ಷಿಸಲು ಸಾಧ್ಯವಾಯಿತು ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿಯ ಹಿರಿಯ ನಾಯಕ ಹಾಗೂ ಇತ್ತೀಚಿನ ದಿನಗಳಲ್ಲಿ ನರೇಂದ್ರ ಮೋದಿ (PM Narendra Modi) ಅವರ ಕಡು ಟೀಕಾಕಾರರಾಗಿ ಬದಲಾಗಿರುವ ಸುಬ್ರಮಣಿಯನ್ ಸ್ವಾಮಿ (Subramanian Swamy) ಮಾತ್ರ ಈ ವಿಚಾರದಲ್ಲಿ ಪ್ರಧಾನಿ ಮೋದಿ ಅವರ ಕಾಲೆಳೆದಿದ್ದಾರೆ.

ಮಾತ್ರವಲ್ಲದೇ ಮಾಜಿ ನಾವಿಕರ ಬಿಡುಗಡೆಗೆ ಶಾರುಖ್ ಖಾನ್ ನಟ ಶಾರುಕ್ ಖಾನ್ (Shah Rukh Khan)ಅವರ ಮಧ್ಯಸ್ಥಿಕೆಯಿಂದಾಗಿ ಮಾಜಿ ಯೋಧರ ಬಿಡುಗಡೆಯಾಗಿದೆ ಎಂದು ಬಾಂಬ್ ಸಿಡಿಸಿದ್ದಾರೆ.

ಯುಎಇ ಮತ್ತು ಕತಾರ್‌ ಭೇಟಿಯ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದರು. ‘ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಗಾಢಗೊಳಿಸುತ್ತದೆ. ನಾನು ಅಧಿಕಾರ ವಹಿಸಿಕೊಂಡ ಯುಎಇಗೆ ಭೇಟಿಯು ನನ್ನ ಏಳನೆಯ ಭೇಟಿಯಾಗಿದೆ. ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ ಮೊಹಮ್ಮದ್ ಬಿನ್ ಝಾಯೇದ್ ಅವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗೆ ದೊರೆತಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ಬಳಿಕ ಕತಾರ್‌ ಭೇಟಿ ನೀಡಲಿದ್ದೇನೆ. ನಾನು ತಮಿಮ್ ಬಿನ್ ಹಮದ್ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ. ಅವರ ನಾಯಕತ್ವದಲ್ಲಿ ಕತಾರ್ ಅಪಾರ ಬೆಳವಣಿಗೆ ಕಂಡಿದೆ ಎಂದು ಹೇಳಿದ್ದಾರೆ.

ಈ ಟ್ವೀಟ್‌ಗೆ ರಿಪ್ಲೈ ಮಾಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ‘ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿದೇಶಾಂಗ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿಫಲವಾದ ನಂತರ ಮೋದಿ ಅವರು ಸಿನಿಮಾ ತಾರೆ ಶಾರುಕ್ ಖಾನ್ ಅವರಿಗೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಂಡರು. ಹೀಗಾಗಿ, ನಮ್ಮ ನೌಕಾ ಅಧಿಕಾರಿಗಳನ್ನು ಬಿಡುಗಡೆ ಮಾಡಲು ಕತಾರ್ ಶೇಖ್‌ಗಳೊಂದಿಗೆ ದುಬಾರಿ ಒಪ್ಪಂದವನ್ನು ಕುದುರಿಸಿಕೊಂಡರು’ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಹೊಗಳಿದ್ದ ಮಾಜಿ ನಾವಿಕರು
ಇನ್ನು ನಿನ್ನೆ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಮಾಜಿ ನಾವಿಕರು “ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಇಲ್ಲದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ ಎಂದು ನಮಗೆ ತುಂಬಾ ಸಂತೋಷವಾಗಿದೆ. ಖಂಡಿತವಾಗಿಯೂ, ನಾವು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಏಕೆಂದರೆ ಇದು ಅವರ ವೈಯಕ್ತಿಕ ಹಸ್ತಕ್ಷೇಪದಿಂದ ಮಾತ್ರ ಸಾಧ್ಯವಾಯಿತು ಎಂದು ಹೇಳಿದ್ದರು.


 

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *