nk news- ಡ್ರಗ್ಸ್ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ

ಗೋಕರ್ಣ: ಡ್ರಗ್ಸ್ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ

ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಡೆವಲಪರ್‌ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರನ್ನು ಬಿಹಾರದ ಮುಂಗೇರ್‌ನ ಜಮಾಲ್‌ಪುರದ ಪಲ್ಲವಿ ಪ್ರಿಯಾ 29 ಮತ್ತು ಜಾರ್ಖಂಡ್‌ನ ಬೆರಾಮೊ, ಬೊಕಾರೊ ಮೂಲದ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.

ಬಾಡಿಗೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಿದ್ದಾರೆ. ಮಹಿಳೆಯರು ಕಾನ್‌ಸ್ಟೆಬಲ್‌ಗೆ ಅಸಭ್ಯ ಭಾಷೆಯಲ್ಲಿ ನಿಂದಿಸಿ ಹಲ್ಲೆ ಮಾಡಲು ಪ್ರಾರಂಭಿಸಿದರು. ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್‌ಸ್ಟೆಬಲ್‌ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಠಾಣೆಯಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿಯೂ ಮಹಿಳೆಯರು ಮತ್ತೆ ತಮ್ಮ ಕೃತ್ಯವನ್ನು ಪುನರಾವರ್ತಿಸಿದರು. ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ. ಪುಣ್ಯ ಕ್ಷೇತ್ರವಾದ ಗೋಕರ್ಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಅಕ್ರಮ ಪಾರ್ಟಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಗೋಕರ್ಣದಲ್ಲಿ ಮಾದಕ ವಸ್ತು ಸೇವನೆ ಮತ್ತು ಗಲಾಟೆ ಸೃಷ್ಟಿಸಿದ ಮಹಿಳೆಯರನ್ನು ಬಂಧಿಸಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *