

ರಾಜ್ಯ ಸರ್ಕಾರ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.


ವಿಧಾನಸೌಧ
ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ.


ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ ಅವರು ನೇಮಕಗೊಂಡಿದ್ದಾರೆ.

ಅಕಾಡೆಮಿಗಳ ಅಧ್ಯಕ್ಷರು
- ಕನ್ನಡ ಪುಸ್ತಕ ಪ್ರಾಧಿಕಾರ – ಅಧ್ಯಕ್ಷರು ಮೈಸೂರು ಮಾನಸ
- ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್
- ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ
- ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ
- ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್
- ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್
- ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ
- ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ
- ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್
- ಕೊಂಕಣಿ ಸಾಹಿತ್ಯ ಅಕಾಡೆಮಿ- ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್
- ಬ್ಯಾರಿ ಸಾಹಿತ್ಯ ಅಕಾಡೆಮಿ- ಉಮರ್ ಯು ಎಚ್
- ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ
- ಬಯಲಾಟ ಅಕಾಡೆಮಿ – ದುರ್ಗದಾಸ್
- ಬಂಜಾರ ಅಕಾಡೆಮಿ – ಡಾಕ್ಟರ್ ಎಂ ಆರ್ ಗೋವಿಂದಸ್ವಾಮಿ
- ರಂಗ ಸಮಾಜ- ಡಾ.ರಾಮಕೃಷ್ಣಯ್ಯ
- ಕೊಡವ ಸಾಹಿತ್ಯ ಅಕಾಡೆಮಿ- ಅಜ್ಜಿನಕೊಂಡ ಮಹೇಶ್
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






