ಇಂದು ಎರಡು ಪಕ್ಷಗಳನ್ನು ತ್ಯಜಿಸಿದ ಪ್ರಮುಖ ಇಬ್ಬರು ನಾಯಕರು!

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಬಿಎನ್ ಬಚ್ಚೇಗೌಡ

ಬಿಎನ್ ಬಚ್ಚೇಗೌಡ

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

“ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.

ಬಿಎನ್ ಬಚ್ಚೇಗೌಡ

ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಟಿಕೆಟ್‌ ದೊರಕುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿ ಎನ್ ಬಚ್ಚೇಗೌಡ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದರು. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ದೂರ ಉಳಿದಿದ್ದರು.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ಜೆಡಿಎಸ್ ಗೂ ಗುಡ್​ಬೈ

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಅಂಗೀಕರಿಸಿದ ಹೊರಟ್ಟಿ, ನಾನು ಎಲ್ಲವನ್ನು ಪ್ರಶ್ನೆ ಮಾಡಿದ್ದೇನೆ. ತಿಬ್ಬೇಗೌಡರು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ

ಇನ್ನು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಜೆಡಿಎಸ್ ವರಿಷ್ಠ ಎಚ್​ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ವಿರುದ್ಧವೂ ತೀವ್ರ ಅಸಮಾಧಾನ ಹೊರಹಾಕಿದ್ದು, ಜೆಡಿಎಸ್ ಗೂ ಗುಡ್​ಬೈ ಹೇಳಿದ್ದಾರೆ.(ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *