ಬಿ.ಜೆ.ಪಿ.ಯಿಂದ ಈಡಿಗರಿಗೆ ಅನ್ಯಾಯ…..

ಕಾಂಗ್ರೆಸ್ ಬೆನ್ನಿಗೆ ಹಿಂದುತ್ವ ಪೋಸ್ಟರ್ ಬಾಯ್ ಸತ್ಯಜಿತ್ ಸುರತ್ಕಲ್: ದಕ್ಷಿಣ ಕನ್ನಡ-ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ!

ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ ಮುಖಂಡ ಸತ್ಯಜಿತ್ ಸುರತ್ಕಲ್ ಆರೋಪಿಸಿದರು.

ಸತ್ಯಜಿತ್ ಸುರತ್ಕಲ್

ಸತ್ಯಜಿತ್ ಸುರತ್ಕಲ್

ಮಂಗಳೂರು: ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ ಮುಖಂಡ ಸತ್ಯಜಿತ್ ಸುರತ್ಕಲ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ನ ಆರ್‌ ಪದ್ಮರಾಜ್‌, ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್‌ ಪೂಜಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್‌ ಅವರನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಒಂದು ಕಾಲದಲ್ಲಿ ಸಮುದಾಯದ ನಾಲ್ಕೈದು ಸಂಸದರಿದ್ದರು, ಆದರೆ ಈಗ ಒಬ್ಬರು ಇಲ್ಲದಂತಾಗಿದ್ದಾರೆ ಎಂದು ಹೇಳಿದ ಅವರು, ಸಮುದಾಯದ ಮುಖಂಡರು ಮತ್ತೆ ಸಂಸದರಾಗುವುದನ್ನು ನೋಡಲು ಉತ್ತಮ ಅವಕಾಶವಿದೆ ಎಂದು ಹೇಳಿದರು.

ಸತ್ಯಜಿತ್ ಸುರತ್ಕಲ್

ಸಮುದಾಯವು ರಾಜಕೀಯವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸದೃಢವಾಗುತ್ತದೆ ಎಂದ ಅವರು, ಶ್ರೀ ನಾರಾಯಣ ಗುರು ವಿಚಾರ ವೇದಿಕೆ ನೇತೃತ್ವದಲ್ಲಿ ಮೂವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗುವುದು ಎಂದರು. ಬಿಲ್ಲವ/ಈಡಿಗ ಮತದಾರರನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಈ ಬೆಳವಣಿಗೆ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ.

ಹಿಂದೊಮ್ಮೆ ಹಿಂದುತ್ವದ ಪೋಸ್ಟರ್ ಬಾಯ್ ಎಂದು ಕಣಕ್ಕಿಳಿದಿದ್ದ ಸುರತ್ಕಲ್ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತಾದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಈಗ ಬಿಜೆಪಿ ಇಲ್ಲ. ಬಿಎಲ್‌ಪಿ, ಬಿಎಲ್ ಸಂತೋಷ್ ಪಕ್ಷ ಮತ್ತು ಬಿಎಸ್‌ಪಿ, ಬಿಎಸ್ ಯಡಿಯೂರಪ್ಪ ಪಕ್ಷವಾಗಿ ಮಾರ್ಪಟ್ಟಿದೆ ಎಂದರು. ನಾನು ಬ್ರಾಹ್ಮಣ, ಬಂಟ, ಒಕ್ಕಲಿಗ ಆಗಿದ್ದಿದ್ರೆ ನಿಸ್ಸಂದೇಹವಾಗಿ ಟಿಕೆಟ್ ಸಿಗುತ್ತಿತ್ತು. ಆದರೆ ನಾನು ಶೂದ್ರನಾಗಿ ಹುಟ್ಟಿದ್ದೇನೆ ಅದಕ್ಕೆ ಟಿಕೆಟ್ ನೀಡಿಲ್ಲ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *