ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ ಪತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಕಾರವಾರ: 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ ಪತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಹೇಮಂತ್ ನಿಂಬಾಳ್ಕರ್ ಅವರು ತನಿಖೆಯ ಸಮಯದಲ್ಲಿ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ಒಲವು ತೋರಿದ್ದಾರೆ ಎಂದು ಆರೋಪಿಸಿದೆ.

ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿದ್ದು, ಇದು ಕೊಲೆ ಎಂದು ಕರೆಯಲು ಸ್ಪಷ್ಟವಾದ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿದೆ. ನಂತರ ಈ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಲೇ ಇದೆ. ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಿಸಲಾದ ಪ್ರಕರಣಗಳ ಸಂಬಂಧ ಅಂಜಲಿಯವರ ಪತಿ ಹೇಮಂತ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿದಾಗ, ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರು ‘ರಾಜಕೀಯ ಮಾಡಲು ಬಿಜೆಪಿಗೆ ಮೃತದೇಹ ಬೇಕು’ ಎಂದು ಪರೋಕ್ಷವಾಗಿ ಹೇಳಿದಾಗ 2018ರ ಪರೇಶ್ ಮೇಸ್ತಾ ಕೊಲೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿತು.

ಪ್ರಾತಿನಿಧಿಕ ಚಿತ್ರ

ಕಾಂಗ್ರೆಸ್ ಪ್ರಚಾರದ ವೇಳೆ ಪ್ರತಿನಿತ್ಯ ಈ ಆರೋಪಗಳು ಪ್ರತಿಧ್ವನಿಸುತ್ತಿದ್ದರೂ, ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಹೇಮಂತ್ ನಿಂಬಾಳ್ಕರ್ ಅವರು ಮುಗ್ಧರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿದರು ಮತ್ತು ಕಂಬಿ ಹಿಂದೆ ಹಾಕಿದರು. ನಾವು ಪ್ರತಿಭಟಿಸುತ್ತಿದ್ದೆವು. ನಮ್ಮನ್ನು ಬಂಧಿಸಲಾಯಿತು ಮತ್ತು ಪ್ರಕರಣ ದಾಖಲಿಸಲಾಗಿದೆ. ಎಲ್ಲ ಹಿಂದೂ ಕಾರ್ಯಕರ್ತರನ್ನು ಕೂಡಿಹಾಕಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಳುಹಿಸಿದರು ಎಂದು ಆರೋಪಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ

ಈಗ ವರ್ಷಗಳ ನಂತರ ನಾವು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪರಾರಿಯಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಬೊಬ್ಬೆ ಹೊಡೆಯುತ್ತಿದ್ದಾರೆ. ಹೇಮಂತ್ ನಿಂಬಾಳ್ಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಈ ವಿಷಯದಲ್ಲಿ ಸಂಬಂಧಪಡದ ಜನರನ್ನು ಬಂಧಿಸಿದರು. ರೂಪಾಲಿ ನಾಯ್ಕ್ ಅವರನ್ನು ಬಂಧಿಸಿ ಕೇಸ್ ಹಾಕಲು ಮಾಡಿದ್ದೇನು? ದಿನಕರ ಶೆಟ್ಟಿ ಬಂಧನ ಯಾಕೆ? ನೂರಾರು ಹಿಂದೂ ಕಾರ್ಯಕರ್ತರನ್ನು ಅವರ ಕಾಂಗ್ರೆಸ್ ಮುಖ್ಯಸ್ಥರನ್ನು ಸಂತೋಷಪಡಿಸಲು ಬಂಧಿಸಲಾಯಿತು’ ಎಂದು ಅವರು ಆರೋಪಿಸಿದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *