SSLC results: ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ, ಶೇಕಡಾ ಶೇ.76.91 ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆ ಪ್ರಥಮ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು karresults.nic.in ಮತ್ತು kseab.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು: ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.

ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಮಾರ್ಕ್ ಶೀಟ್ ತಾತ್ಕಾಲಿಕ

ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಆನ್‌ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ SSLC ಮಾರ್ಕ್‌ಶೀಟ್ ಪಡೆಯಬೇಕು.

ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3ಕ್ಕೆ ಅವಕಾಶ: ವಿದ್ಯಾರ್ಥಿಗಳು ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ. ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *