

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್, BSYಗಾಗಿ CID ಹುಡುಕಾಟ!
ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ.

ಬಿಎಸ್ ಯಡಿಯೂರಪ್ಪ
ಬೆಂಗಳೂರು: ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದ್ದು ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಸಿಐಡಿ ಬಂಧಿಸುವ ಸಾಧ್ಯತೆ ಇದೆ.
ಪೋಕ್ಸೋ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್ ನ ನ್ಯಾಯಾಧೀಶರಾದ ರಮೇಶ್ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ. ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಜೂನ್ 15ರೊಳಗೆ ಚಾರ್ಜ್ಶೀಟ್ ಸಲ್ಲಿಸಬೇಕಿದೆ. ಹೀಗಾಗಿ ಯಡಿಯೂರಪ್ಪನವರಿಗೆ ವಿಚಾರಣೆಗೆ ಬರುವಂತೆ ನಿನ್ನೆ ಸಿಐಡಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ಇದಕ್ಕೆ ಬಿಎಸ್ ಯಡಿಯೂರಪ್ಪ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು.

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಸಿಐಡಿ ನೋಟಿಸ್ ನೀಡಿತ್ತು. ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
