ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ

ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ತಿಂಗಳೊಳಗೆ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಆರ್.ವಿ.ದೇಶಪಾಂಡೆ ಸೂಚನೆ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರ್.ವಿ.ದೇಶಪಾಂಡೆ

ಆರ್.ವಿ.ದೇಶಪಾಂಡೆ

ಬೆಂಗಳೂರು: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 98 ಶಿಫಾರಸುಗಳನ್ನು ಒಂದು ತಿಂಗಳೊಳಗೆ ಸಂಪೂರ್ಣವಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಾನು ಆಯೋಗದ ಅಧ್ಯಕ್ಷನಾಗಿ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗ 99 ಶಿಫಾರಸ್ಸುಗಳು ಮಾತ್ರ ಅನುಷ್ಠಾನಗೊಂಡಿದ್ದು, ಆಯೋಗವು ಈಗಾಗಲೇ ಮಾಡಿದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಹೆಚ್ಚಿನ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ, ಸಚಿವರು, ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಪತ್ರಗಳ ಮೂಲಕ ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.

ಕಳೆದ ತಿಂಗಳಲ್ಲಿನಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಬಗ್ಗೆ ಮಾಸಿಕ ಸಭೆಗಳಲ್ಲಿಯೂ ಪರಿಶೀಲಿಸಲು ತಿಳಿಸಲಾಗಿತ್ತು. ಇದರ ಪರಿಣಾಮವಾಗಿ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಗಣನೀಯ ಪ್ರಗತಿ ಕಂಡು ಬಂದಿದೆ ಎಂದು ತಿಳಿಸಿದರು.

ಆರ್.ವಿ.ದೇಶಪಾಂಡೆ

ಆಯೋಗವು 2021ರ ಜೂನ್‍ನಲ್ಲಿ ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು, ಕಾನೂನು ಮಾಪನ ಶಾಸ್ತ್ರ ಹಾಗೂ ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಮೊದಲನೆಯ ವರದಿಯಲ್ಲಿ ಕ್ರಮವಾಗಿ 528, 111 ಮತ್ತು 217 ಒಟ್ಟು 856 ಶಿಫಾರಸ್ಸುಗಳನ್ನು ಮಾಡಿದೆ. ಕಳೆದ ಮೂರು ವರ್ಷಗಳಲ್ಲಿ ಈ ಮೂರು ಇಲಾಖೆಗಳ ಶಿಫಾರಸ್ಸುಗಳ ಅನುಷ್ಠಾನ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಜೂ.18, 19 ಹಾಗೂ 20ರಂದು ಸಂಬಂಧಿಸಿದ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯೊಂದಿಗೆ ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ಒಟ್ಟು 528 ಶಿಫಾರಸ್ಸುಗಳಲ್ಲಿ 205 ಅನುಷ್ಠಾನಗೊಳಿಸಲಾಗಿದೆ. 76 ಅನುಷ್ಠಾನದ ಹಂತದಲ್ಲಿವೆ, 51 ಪರಿಶೀಲನೆಯಲ್ಲಿವೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಿಸಿದ 111 ಶಿಫಾರಸ್ಸುಗಳಲ್ಲಿ 37 ಅನುಷ್ಠಾನಗೊಳಿಸಲಾಗಿದೆ. 18 ಅನುಷ್ಠಾನದ ಹಂತದಲ್ಲಿವೆ, 18 ಪರಿಶೀಲನೆಯಲ್ಲಿವೆ. ಸಾರಿಗೆ ಇಲಾಖೆಗೆ ಸಂಬಂಧಿಸಿದ 217 ಶಿಫಾರಸ್ಸುಗಳಲ್ಲಿ 117 ಅನುಷ್ಠಾನಗೊಳಿಸಲಾಗಿದೆ. 4 ಅನುಷ್ಠಾನದ ಹಂತದಲ್ಲಿವೆ ಹಾಗೂ 96 ಪರಿಶೀಲನೆಯಲ್ಲಿವೆ ಎಂದು ವಿವರಣೆ ನೀಡಿದರು. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *