ರವಿ ಹರಳಾದ್ ಹಾಗೂ ವಿಶ್ವನಾಥ ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ ರಿಗೆ ಸನ್ಮಾನ

ಸಿದ್ದಾಪುರ: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ತಾಲೂಕಿನ ತರಳಿ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನಡೆದ ವನಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಗಿಡ ನೆಟ್ಟು ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ವಿಜೇತರಾದ ಅರಣ್ಯ ಇಲಾಖೆಯ ರವಿ ಹರಳಾದ್ ಹಾಗೂ ವಿಶ್ವನಾಥ ನಾಯ್ಕ, ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ.ಬಿ.ನಾಯ್ಕ ಕಡಕೇರಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಪರಿಸರ ಸಮತೋಲನವಾಗಿದ್ದರೆ ಮಾತ್ರ ನಾಡು ಸುಭೀಕ್ಷವಾಗಿರಲು ಸಾಧ್ಯ. ಪ್ರತಿಯೊಬ್ಬರು ಸಹ ಅರಣ್ಯ ಸಂರಕ್ಷಣೆಗೆ ಮಹತ್ವ ನೀಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಡಿಎಫ್ಓ ಅಜ್ಜಯ್ಯ, ಎಸಿಎಫ್ ಪ್ರವೀಣ ಬಸರೂರ, ಆರ್.ಎಫ್.ಓ ಬಸವರಾಜ ಬೋಚ್ಚಳ್ಳಿ, ತರಳಿ ಮಠದ ಅಧ್ಯಕ್ಷ ಎನ್.ಡಿ.ನಾಯ್ಕ, ಸಮಿತಿಯ ಎಸ್.ಎಚ್.ನಾಯ್ಕ, ಎಂ.ಆಯ್.ನಾಯ್ಕ, ದಿನೇಶ ನಾಯ್ಕ, ಸಿ‌.ಆರ್.ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *