ಶೀಘ್ರದಲ್ಲೇ 2,000 ಲೈನ್‌ಮನ್‌ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್

ಈ ಬಾರಿ ಆರ್‌ ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ.

ಸಚಿವ ಕೆ.ಜೆ.ಜಾರ್ಜ್

ಸಚಿವ ಕೆ.ಜೆ.ಜಾರ್ಜ್

ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2 ಸಾವಿರ ಲೈನ್‍ಮೆನ್‍ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದರು.

ಬುಧವಾರ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಲೈನ್‍ಮೆನ್‍ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದು ಹೇಳಿದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದುದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‍ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು.

ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್

ಈಗಾಗಲೇ 1 ಸಾವಿರ ಸಹಾಯಕ ಇಂಜಿನಿಯರ್ ಗಳ (ಎಇ), ಕಿರಿಯ ಇಂಜಿನಿಯರ್ ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಿಗಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ ಎಂದು ಹೇಳಿದರು.

ಈ ಬಾರಿ ಆರ್‌ ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮ ಪ್ರಶಂಸನೀಯ. ಅವರೆಲ್ಲನ್ನೂ ಅಭಿನಂದಿಸಲೆಂದೇ ಇಲ್ಲಿಗೆ ಬಂದಿದ್ದೇನೆ. ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2 ಸಾವಿರ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಎಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು ದಾಖಲೆಯಾಗಿದೆ.

ಅದರಲ್ಲೂ ಆರ್‌ ಟಿಪಿಎಸ್ ವಿದ್ಯುತ್ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್ ಸಾಮರ್ಥ್ಯದ 3ನೇ ವಿದ್ಯುತ್ ಘಟಕದಲ್ಲಿ ಎ.4ರಂದು 216 ಮೆಗಾವ್ಯಾಟ್ ಉತ್ಪಾದನೆ ಮಾಡಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ ಟಿಪಿಎಸ್‍ನ ಏಳು ವಿದ್ಯುತ್ ಘಟಕಗಳು ಸೇರಿ ಶೇ.85ರಷ್ಟು ವಿದ್ಯುತ್ ಉತ್ಪಾದಿಸಿವೆ ಎಂದು ಮಾಹಿತಿ ನೀಡಿದರು.

ನಮ್ಮ ಸರಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಿಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‍ನಿಂದಲೂ ಕಲ್ಲಿದ್ದಲು ಬರುತ್ತಿದೆ. ಪ್ರಸಕ್ತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ಮಾಹಿತಿ ನೀಡಿದರು. (kp.c)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *