


ಸಿದ್ದಾಪುರ: ತಾಲೂಕಿನ ಅವರಗುಪ್ಪಾದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಗ್ರಂಥಾಲಯ, ಗಣಕಯಂತ್ರ ಪ್ರಯೋಗಾಲಯ ಹಾಗೂ ತರಗತಿ ಕೊಠಡಿಗಳಿಗೆ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶನಿವಾರ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಆಶಯದಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಗುರುಗಳ ಜವಾಬ್ದಾರಿಯಾಗಿದೆ. ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ದೊರೆಯಬೇಕು. ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಹ ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕೋಲಶಿರ್ಸಿ ಗ್ರಾಮ ಪಂಚಾಯ್ತಿ ಸದಸ್ಯ ತಿಲಕಕುಮಾರ ನಾಯ್ಕ, ಕಾಲೇಜಿನ ಪ್ರಾಚಾರ್ಯ ಶಾಂತರಾಮ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಕಾಲೇಜಿನ ಕುಲಸಚಿವೆ ಶೋಭಾ ಮತ್ತಿತರರು ಉಪಸ್ಥಿತರಿದ್ದರು.
