112 ಉತ್ತರ ಕನ್ನಡದಲ್ಲೇಕೆ ತುಘಲಕ್‌ ದರ್ಬಾರ್?‌

ಆಕಾಶಕ್ಕೆ ತೂತು ಬಿದ್ದು ಉತ್ತರ ಕನ್ನಡ ಜಿಲ್ಲೆ ಮಳೆಗೆ ತತ್ತರಿಸುತ್ತಿದೆ. ಈ ಸಮಯದಲ್ಲಿ ತುರ್ತು ಸೇವೆಗಳು ಅನಿವಾರ್ಯ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ತುರ್ತು ಸೇವೆಗಳ ಸ್ಥಿತಿಯೇ ಚಿಂತಾಜನಕವಾಗಿರುವ ಪರಿಸ್ಥಿತಿ ಜನಸಾಮಾನ್ಯರ ಬೇಸರಕ್ಕೆ ಕಾರಣವಾಗಿದೆ.

ಜಿಲ್ಲಾ ಉಸ್ತುವಾರಿ ಮಂಕಾಳು ವೈದ್ಯರ ಸೋಮಾರಿತನಿಂದ ಒಂದೆಡೆ ಅಗ್ನಿ ಸಾಮಕ ವ್ಯವಸ್ಥೆ ಹಳ್ಳ ಹಿಡಿದಿದ್ದರೆ, ಈಗ ೧೧೨ ವ್ಯವಸ್ಥೆಯನ್ನೇ ಬುಡಮೇಲಾಗಿಸಿರುವ ವರ್ತಮಾನ ಜನರ ಆತಂಕಕ್ಕೆ ಕಾರಣವಾಗಿದೆ.

ಕಳೆದ ಹತ್ತು ವರ್ಷಗಳಿಂದ ರಾಜ್ಯದಾದ್ಯಂತ ಚಾಲ್ತಿಯಲ್ಲಿರುವ ಯೋಜನೆ ೧೧೨ ಈ ಯೋಜನೆಯ ಲಾಭ ಜನಸಾಮಾನ್ಯರಿಗಾಗುತ್ತಿರುವುದು ವಾಸ್ತವ ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವ್ಯವಸ್ಥೆಯನ್ನೇ ಹಳ್ಳ ಹಿಡಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯ ಬೇಸರ ವ್ಯಕ್ತಪಡಿಸಿದೆ.

ತುರ್ತು ಸ್ಥಿತಿಯಲ್ಲಿ ಸ್ಥಳಕ್ಕೆ ತಲುಪುವ ಜವಾಬ್ಧಾರಿ ಇರುವ ೧೧೨ ಗಾಡಿಗೆ ಹಿಂದೆ ಆಯಾ ತಾಲೂಕಿನ ವ್ಯಾಪ್ತಿಯ ಸಿಬ್ಬಂದಿಗಳನ್ನು ನಿಯೋಜಿಸಲಾಗುತಿತ್ತು. ಆದರೆ ಈಗ ಒಂದು ತಾಲೂಕಿನ ಪೊಲೀಸ್‌ ಸಿಬ್ಬಂದಿಗಳನ್ನು ಇನ್ನೊಂದು ತಾಲೂಕಿಗೆ ನಿಯೋಜಿಸುತ್ತಿರುವ ಹೊಸ ವ್ಯವಸ್ಥೆ ಸಿಬ್ಬಂದಿಗಳ ನೈತಿಕ ಸ್ಥೈರ್ಯ ಕುಂದಿಸುತ್ತಿರುವ ಆರೋಪಕ್ಕೆ ಉತ್ತರ ಕನ್ನಡ ಪೊಲೀಸ್‌ ವ್ಯವಸ್ಥೆ ಗುರಿಯಾಗಿದೆ.

ಡಿ.ಆರ್.‌ ಮತ್ತು ಸಿವಿಲ್‌ ಪೊಲೀಸ್‌ ಸೇರಿದ ೧೧೨ ಹಿಂದಿನ ತಂಡ ಅನಿವಾರ್ಯತೆಗೆ ಆಪದ್ಭಾಂದವನಾಗಿತ್ತು. ಆದರೆ ಈಗ ಬೇರೆ ಕಡೆ ಇಲ್ಲದ ಅನ್ಯ ಠಾಣೆ, ಅನ್ಯ ತಾಲೂಕುಗಳ ಸಿಬ್ಬಂದಿಗಳನ್ನು ಮನಸ್ಸು ಬಂದ ಕಡೆ ನಿಯೋಜಿಸಿರುವ ಪರಿಣಾಮ ೧೧೨ ಸಾಮರ್ಥ್ಯ ಕುಗ್ಗಿಸುತ್ತಿರುವ ವಿಷಯ ಈಗ ಪೊಲೀಸ್‌ ಇಲಾಖೆ ದಾಟಿ ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನೂತನ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಈ ತುಘಲಕ್‌ ವ್ಯವಸ್ಥೆ ಸರಿಪಡಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *