ಪ್ರವಾಹ : ಮಾನವೀಯ ಸ್ಫಂದನಕ್ಕೆ ಭೀಮಣ್ಣ ನಾಯ್ಕ ಕರೆ

ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ‌ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಸಾಲಿಗಿಂತ ಈ ಬಾರಿ ಅತ್ಯುತ್ತಮ ಮಳೆಯಾಗಿರುವುದು ತುಂಬಾ ಖುಷಿಯ ಸಂಗತಿ. ಜತೆಗೆ ಮಳೆಯಿಂದ ಸಾಕಷ್ಟು ಕಡೆ ಮನೆ, ಜಾನುವಾರು, ರಸ್ತೆ, ಕೃಷಿ ಕ್ಷೇತ್ರಕ್ಕೆ ತುಂಬಾ ಹಾನಿಯಾಗಿದೆ. ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನದಿ ಪಾತ್ರದ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜನ ಸುರಕ್ಷಿತ ಪ್ರದೇಶಗಳತ್ತ ಧಾವಿಸಬೇಕು. ಅಧಿಕಾರಿಗಳು ಅಂತಹ ಪ್ರದೇಶಗಳನ್ನು ಗುರುತಿಸಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದರು.


ಈಗಾಗಲೇ ಮನೆ ಹಾನಿಯಾದವರಿಗೆ ಸರ್ಕಾರದ ಸಹಾಯಧನದ ಚೆಕ್ ನೀಡಲಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ನೈಜ ವರದಿ ನೀಡಬೇಕು. ರಸ್ತೆ, ಸೇತುವೆ, ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಆದ ಹಾನಿಯ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ‌ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಈ ವೇಳೆ ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಪಂ ಇಓ ದೇವರಾಜ ಹಿತ್ತಲಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ, ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ, ಸಿಪಿಐ ಕುಮಾರ ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

wild news….! ಜಿಂಕೆ, ಚಿರತೆ ಸಾವು!

ಜಿಂಕೆ ಬೇಟೆಯಾಡಿ ಕೊಂದ ಅರೋಪದ ಮೇಲೆ ಅರಣ್ಯ ಇಲಾಖೆಯವರು ಯಲ್ಲಾಪುರ ತಾಲೂಕಿನ ಮದನೂರು ಗ್ರಾಮದ ಹುಲಗೋಡಿನ ರಮೇಶ ನಾಗೇಶ ಗಾಂವ್ಕರ ಎಂಬಾತನನ್ನು ಬಂಧಿಸಿ ಆತನಿಂದ...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ!

ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ, ಏಮ್ಸ್‌​ ಆಸ್ಪತ್ರೆಗೆ ದೇಹ ದಾನ! ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು...

ಸಿಪಿಐ-ಎಂ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ

72 ವರ್ಷದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *