ಕೊಪ್ಪದ ಹುಡುಗಿ ಕೊಂದ ಸಾಗರದ ಯುವಕ ಅಂದರ್….‌

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದು ಹೂತಿಟ್ಟ ಪ್ರಿಯಕರ

ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ.

ಸೌಮ್ಯ-ಸೃಜನ್

ಸೌಮ್ಯ-ಸೃಜನ್

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ತನ್ನನ್ನು ಮದುವೆಯಾಗುವಂತೆ ಸೌಮ್ಯ ಸೃಜನ್ ನನ್ನು ಒತ್ತಾಯಿಸುತ್ತಿದ್ದಳು. ಇದರಿಂದ ಕೋಪಗೊಂಡ ಸೃಜನ್ ಸೌಮ್ಯಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದನು. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರ ತನಿಖೆಯಿಂದ ವಿಚಾರ ಬೆಳಕಿಗೆ ಬಂದಿದೆ.

ಸೌಮ್ಯ ತೀರ್ಥಹಳ್ಳಿಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಜುಲೈ 2ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ. ಈಗ ಬೇಡ, ಮನೆಯಲ್ಲಿ ಜಗಳವಾಗುತ್ತದೆ. ಸದ್ಯ ಮನೆಗೆ ಹೋಗು ಮುಂದೆ ನೋಡೋಣಾ ಎಂದು ಸಮಾಧಾನ ಮಾಡಲು ಮುಂದಾಗಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಸೃಜನ್ ಸೌಮ್ಯಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಮೃತದೇಹವನ್ನು ಮುಂಬಾಳು ಬಳಿ ಹೂತಿಟ್ಟಿದ್ದಾನೆ.

ಮಗಳು ಮನೆಗೆ ಬರದಿದ್ದಾಗ ಆತಂಕ ಕೊಂಡ ಪೋಷಕರು ಕೊಪ್ಪ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರ ವಿಚಾರಣೆ ವೇಳೆ ತನ್ನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟಿದ್ದಾಗಿ ಸೃಜನ್ ಬಾಯಿ ಬಿಟ್ಟಿದ್ದಾನೆ. ಇನ್ನು ಪೊಲೀಸರು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *