ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ….. a viral statement

ಆತ ಯಾವಾಗಲೂ ಕುಡಿದ ಮತ್ತಿನಲ್ಲಿರುತ್ತಾನೆ, ಡ್ರಗ್ಸ್ ಟೆಸ್ಟ್ ಮಾಡಿ: ರಾಹುಲ್ ಬಗ್ಗೆ ಕಂಗನಾ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ಕಂಗನಾ ರಣಾವತ್

ಕಂಗನಾ ರಣಾವತ್

ನವದೆಹಲಿ: ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ರಾಹುಲ್ ಗಾಂಧಿ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ್ದು ಮಾತನಾಡುತ್ತಿದ್ದು ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?

ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.

ಕಂಗನಾ ರಣಾವತ್

ಮುಂದುವರಿದು, ‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.

‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *