ಪಕ್ಷಭೇದ ಮರೆತು ಸಾರ್ವಜನಿಕ ಒಳಿತಿಗೆ ಕೆಲಸ ಮಾಡಲು ಶಾಸಕರ ಸಲಹೆ

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಸಿದ್ದಾಪುರ ತಾಲೂಕಿನ ವಿವಿಧ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶ ಹಾಗೂ ಮನೆಗಳನ್ನು ಪರಿಶೀಲಿಸಿದರು.


ತಾಲೂಕಿನ ದೊಡ್ಮನೆಯ ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಹಾಸ್ಟೆಲ್ ಕಟ್ಟಡ ಹಾಗೂ ಅಡುಗೆ ಕೋಣೆ ವೀಕ್ಷಿಸಿ ಸ್ವಚ್ಚತೆ ಕಾಪಾಡುವ ಜತೆಗೆ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ನಂತರ ದೊಡ್ಮನೆಯ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ ಪಂಚಾಯ್ತಿ ವ್ಯಾಪ್ತಿಯ ಅಗತ್ಯ ಕಾಮಗಾರಿಗಳಿಗೆ ಅನುದಾನ ನೀಡುವ ಜತೆಗೆ ಹಂತ ಹಂತವಾಗಿ ಅನುದಾನ ನೀಡುವುದಾಗಿ ತಿಳಿಸಿ ಚುನಾಯಿತ ಪ್ರತಿನಿಧಿಗಳು ಪಕ್ಷಬೇಧ ಮರೆತು ಸಾರ್ವಜನಿಕರ‌ ಸಮಸ್ಯೆಗೆ ಧ್ವನಿಯಾಗಬೇಕೆಂದು‌ ಕರೆ ನೀಡಿದರು.


ತಾಲೂಕಿನ ಸೋವಿನಕೊಪ್ಪ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಬೈಲ್ ಪರಿಶಿಷ್ಟರ ಕೇರಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿ ವೈಯಕ್ತಿಕ ಸಹಾಯ ನೀಡಿದರು. ನಂತರ ಶಿರಗಳ್ಳೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಮನೆ ವೀಕ್ಷಿಸಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿಕೊಳ್ಳುವಂತೆ ಆರ್ಥಿಕ ನೆರವು ನೀಡಿದರು‌. ನಂತರ ಸೋವಿನಕೊಪ್ಪ ಸೊಸೈಟಿಯಲ್ಲಿ ಸಿ.ಎಸ್.ಸಿ ಕೇಂದ್ರ ಉದ್ಘಾಟಿಸಿ ಗ್ರಾಮ ಪಂಚಾಯ್ತಿಯಲ್ಲಿ ಸಭೆ ನಡೆಸಿದರು.‌ ಅಲ್ಲಿಂದ ಹುಲ್ಕುತ್ರಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಯಾದ ಮನೆಗಳನ್ನು ವೀಕ್ಷಿಸಿ ವೈಯಕ್ತಿಕ ಸಹಾಯ ನೀಡಿದರು. ಮಧ್ಯಾಹ್ನ ತಾಲೂಕಿನ ಹಾರ್ಸಿಕಟ್ಟಾ ಹಾಗೂ ತಂಡಾಗುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾದ ಪ್ರದೇಶ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕಾ ಅಧ್ಯಕ್ಷ ಕೆ.ಜಿ.ನಾಗರಾಜ, ಡಿಸಿಸಿ ಉಪಾಧ್ಯಕ್ಷ ವಿ.ಎನ್.ನಾಯ್ಕ, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಬಿ.ಆರ್.ನಾಯ್ಕ, ಪ್ರಮುಖರಾದ ಸಿ.ಆರ್.ನಾಯ್ಕ, ಬಾಬು ನಾಯ್ಕ ಕಡಕೇರಿ,
ರವಿ ನಾಯ್ಕ ಹೆಗ್ಗಾರಕೈ, ಅಣ್ಣಪ್ಪ ಶಿರಳಗಿ, ಮಂಜುನಾಥ ನಾಯ್ಕ ತ್ಯಾರ್ಸಿ, ಎಂ.ಜಿ.ನಾಯ್ಕ ಹಾದ್ರಿಮನೆ, ಎಂ.ಆರ್.ನಾಯ್ಕ, ವಿನಾಯಕ ಕೊಂಡ್ಲಿ ಮತ್ತಿತರರು ಹಾಜರಿದ್ದರು.‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *