ವಿಭಾಗ ಮಟ್ಟದ ವಾಲಿಬಾಲ್‌ ಯಶಸ್ವಿ – ಶಿರಸಿ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ತಂಡಗಳು ರಾಜ್ಯಮಟ್ಟಕ್ಕೆ

ಸಿದ್ಧಾಪುರ, ಇಲ್ಲಿಯ ಐತಿಹಾಸಿಕ ನೆಹರೂ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಾಥಮಿಕ & ಪ್ರೌಢಶಾಲೆಗಳ ವಿಭಾಗ ಮಟ್ಟದ ವಾಲಿಬಾಲ್‌ ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನಗೊಂಡಿದೆ.

ಇದೇ ಮೊದಲಬಾರಿ ಸಿದ್ದಾಪುರ ತಾಲೂಕಿನಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟ ಸಂಘಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌ ನಾಯ್ಕ ನೇತೃತ್ವದ ಶಿಕ್ಷಣ ಇಲಾಖೆಯ ಸಿಬ್ಬಂದಿಗಳ ತಂಡ ಶಾಸಕ ಭೀಮಣ್ಣ ನಾಯ್ಕ ಮೇಲ್‌ ಉಸ್ತುವಾರಿಯಲ್ಲಿ ಈ ಕ್ರೀಡಾ ಕೂಟ ಆಯೋಜಿಸಿತ್ತು. ಮೊದಲ ದಿನದ ಕ್ರೀಡಾಕೂಟದ ಉದ್ಘಾಟನೆ ವೇಳೆ ಸುರಿದ ಭಾರಿ ಮಳೆ ತುಸು ಅಡಚಣೆ ಉಂಟುಮಾಡಿತ್ತಾದರೂ ಮಾರನೇ ದಿನ ಮಧ್ಯಾಹ್ನದ ವೇಳೆಗೆ ಕ್ರೀಡಾಕೂಟ ಸಾಂಗವಾಗಿ ಸಂಪನ್ನವಾದಾಗ ಎಲ್ಲರ ಸಂಬ್ರಮ ಎದ್ದು ಕಾಣುತಿತ್ತು.

ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಶಿರಸಿ(ಪ್ರಥಮ) ಹಾವೇರಿ (ದ್ವಿತಿಯ) ಬೆಳಗಾವಿ (ತೃತೀಯ) ಸ್ಥಾನ ಗಳಿಸಿದವು.

೧೪ ವರ್ಷಗಳ ಒಳಗಿನ ಬಾಲಕಿಯರ ವಿಭಾಗದಲ್ಲಿ ಗದಗ ಹಾವೇರಿ ಬಾಗಲಕೋಟೆಗಳು ಕ್ರಮವಾಗಿ ಮೊದಲ, ಎರಡನೇ, ತೃತೀಯ ಸ್ಥಾನ ಗಳಿಸಿದವು.

೧೭ ವರ್ಷಗಳ ಒಳಗಿನ ಬಾಲಕಿಯರ ವಿಭಾಗದಲ್ಲಿ ಬೆಳಗಾವಿ, ಗದಗ, ಧಾರವಾಡ ಕ್ರಮವಾಗಿ ಪ್ರಥಮ, ದ್ವಿತಿಯ, ತೃತೀಯ ಸ್ಥಾನ ಗಳಿಸಿದರೆ ೧೭ ವರ್ಷಗಳ ಒಳಗಿನ ಬಾಲಕರ ವಿಭಾಗದ ವಾಲಿಬಾಲ್‌ ನಲ್ಲಿ ಚಿಕ್ಕೋಡಿ (ಪ್ರಥಮ) ಶಿರಸಿ ( ದ್ವಿತಿಯ) ಕಾರವಾರ (ತೃತೀಯ) ಸ್ಥಾನ ಗಳಿಸಿದವು.

(ಈ ವಿಭಾಗೀಯ ಮಟ್ಟದ ಕ್ರೀಡಾಕೂಟದ ಬಹುತೇಕ ಲೈವ್‌ ವರದಿಗಳು samajamukhinews youtube channel & samaajamukhi fb page ಗಳಲ್ಲಿ ಪ್ರಕಟವಾಗಿದ್ದು ಆಸಕ್ತರು ಅವುಗಳನ್ನು ವೀಕ್ಷಿಸಿ ಶೇರ್‌, ಲೈಕ್‌ ಮಾಡಿ subscribe ಮಾಡುವ ಮೂಲಕ ಸಹಕರಿಸಲು ವಿನಂತಿ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *