ಸಮಾಜದ ಪ್ರತಿಭಾವಂತ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಿಸುವ ಮತ್ತು ಸಮಾಜದ ಸಾಧಕರನ್ನು ಗೌರವಿಸುವ ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಕಾರ್ಯಕ್ರಮ ಡಿ.೧ ರ ರವಿವಾರ ಸಿದ್ಧಾಪುರ ರಾಘವೇಂದ್ರಮಠ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಾಜದ ವಿದ್ಯಾ ರ್ಥಿಗಳಾಗಿ ಶೇ.೯೦ ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರತಿಭಾವಂತರು ಸಂಘದ ಸದಸ್ಯರನ್ನು ಸಂಪರ್ಕಿಸಿ ಮಾಹಿತಿ ನೀಡುವುದು ಮತ್ತು ರವಿವಾರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಿದರು.
ರವಿವಾರ ಬೆಳಿಗ್ಗೆ ೧೧ ಗಂಟೆಗೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ ನಾಯ್ಕ ಉದ್ಘಾಟಿಸಲಿದ್ದಾರೆ. ರವಿ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಅಧಿಕಾರಿಗಳು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.