ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ

ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ ಹೇಳಿದರು.
ಅವರು ಸೋಮವಾರ ಸಂಜೆ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.


ತಾಪಂ ಕಾರ್ಯನಿರ್ವಹಣಾಧಿಕಾರಿ ಬಳಿ ಕೆರೆಗಳ ಅಭಿವೃದ್ಧಿ ಕುರಿತಂತೆ ಪ್ರಶ್ನಿಸಿದಾಗ ಅವರ ಉತ್ತರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರೇಲ್ವೆ, ವಿದ್ಯುತ್ ತಂತಿ ಮಾರ್ಗ, ರಸ್ತೆ ಮುಂತಾಗಿ ಹಲವು ಕಾರಣಗಳಿಂದ ಅರಣ್ಯ ಕಡಿಮೆಯಾಗುತ್ತಿದೆ. ಮರಗಿಡಗಳನ್ನು ಹೆಚ್ಚಿಸುವ ಕೆಲಸವಾಗಬೇಕು. ರೆವಿನ್ಯೂ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಪದೇ ಪದೇ ಬೋರ್‍ವೆಲ್ ತೆಗೆಸುವ ಬದಲು ಇರುವ ಬೋರ್ ಗಳಿಗೆ ನೀರಿಂಗಿಸುವಂತಾಗಬೇಕು. ಸ್ಥಳೀಯವಾಗಿ ವಯಸ್ಸಾದವರಿಂದ ಅವರ ತಿಳುವಳಿಕೆ ಬಳಸಿಕೊಂಡು ಜಲಮೂಲ ಉಳಿಸುವ ಕೆಲಸಮಾಡಿ. ಬೆಂಗಳೂರಿನಲ್ಲಿ ಕೂತವರು ಇವನ್ನ ರೂಪಿಸಬೇಕೆಂದಿಲ್ಲ. ಯಾವುದು ಇಲ್ಲಿ ಉಪಯೋಗವಾಗುತ್ತದೋ ಅದನ್ನು ಮಾಡಿ. ಸರಕಾರಿ ಕಚೇರಿಗಳ ಬಾವಿಗಳಲ್ಲೂ ನೀರಿಂಗಿಸುವ ವ್ಯವಸ್ಥೆ ಮಾಡಿ ಎಂದರು.


ತಾಲೂಕಿನಲ್ಲಿ ಮಂಗನ ಕಾಯಿಲೆ ಸಂಪೂರ್ಣವಾಗಿ ಕಡಿಮೆಯಾಗಿದೆ ಎಂದು ತಾಲೂಕ ಆರೋಗ್ಯಾಧಿಕಾರಿಯಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಮಂಗನ ಕಾಯಿಲೆಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವದು ಅಗತ್ಯ. ರೋಗ ಬಂದನಂತರದ ಕ್ರಮಕ್ಕಿಂತ ಮುಂಚಿತವಾಗಿ ಅದನ್ನು ನಿಯಂತ್ರಿಸಲು ಮುಂದಾಗಬೇಕು. ಸಪ್ಟೆಂಬರ ತಿಂಗಳಿಂದ ಸಮರೋಪಾದಿಯಲ್ಲಿ ರೋಗ ತಡೆಗಟ್ಟುವ ಚುಚ್ಚುಮದ್ದು ನೀಡಲು ಸಿದ್ಧತೆ ಮಾಡಿ. ಅದಕ್ಕೆ ಅಗತ್ಯವಾದ ಔಷಧಗಳ ಬಗ್ಗೆ ಮಾಹಿತಿ ನೀಡಿದರೆ ಪೂರೈಕೆ ವ್ಯವಸ್ಥೆಗೆ ಅನುಕೂಲವಾಗುತ್ತದೆ ಎಂದರು.

ಅಡಕೆ, ಭತ್ತ ಇನ್ನಿತರ ಬೆಳೆಗಳ ಹಾನಿ ಬಗ್ಗೆ ಸಮೀಕ್ಷೆ ಮಾಡಿ. ಅಡಕೆ ಕೊಳೆ ರೋಗದ ಬಗ್ಗೆ ಅದು ಕಂಡುಬಂದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಿದ್ಧಪಡಿಸಿಟ್ಟುಕೊಳ್ಳಿ ಎಂದು ಕೃಷಿ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ, ಅರಣ್ಯ,ಪಟ್ಟಣ ಪಂಚಾಯತ ಮುಂತಾಗಿ ಹಲವು ಇಲಾಖೆಗಳ ಪ್ರಗತಿಯ ವಿವರ ಪಡೆದರು.
ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ತಹಸೀಲದಾರ ಗೀತಾ ಸಿ.ಜಿ.ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *