rahul gandhi on indian constitution- ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು!

Rahul Gandhi: ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು; ದ್ರೋಣ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಮೋದಿ ಸರ್ಕಾರ ಯುವಕರ ಬೆರಳು ಕತ್ತರಿಸುತ್ತಿದೆ!

” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಕೈಲಿ ಇಡುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

Rahul Gandhi- PM Modi

ರಾಹುಲ್ ಗಾಂಧಿ- ಪ್ರಧಾನಿ ನರೆಂದ್ರ ಮೋದಿ

ನವದೆಹಲಿ: ಲೋಕಸಭೆಯಲ್ಲಿ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಎಂದಿನಂತೆ ಮಹಾಭಾರತ, ದೇವರುಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿದ್ದಾರೆ.

ಭಾರತ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಸಂಸತ್ ನಲ್ಲಿ ಸಂವಿಧಾನದ ಬಗ್ಗೆ ಚರ್ಚೆಗಳಾಗುತ್ತಿವೆ. ಈ ಕುರಿತು ಭಾಷಣ ಮಾಡಿರುವ ರಾಹುಲ್ ಗಾಂಧಿ ಬಿಜೆಪಿ ಮನುಸ್ಮೃತಿಯನ್ನು ಸಂವಿಧಾನಕ್ಕಿಂತ ಉನ್ನತ ಸ್ಥಾಯಿಯಲ್ಲಿ ಪರಿಗಣಿಸುತ್ತದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರ ಯುವಕರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂಬ ಅಂಶವನ್ನು ಟೀಕಿಸಲು ಮಹಾಭಾರತವನ್ನು ಉಲ್ಲೇಖಿಸಿದ್ದಾರೆ. ” ಮಹಾಭಾರತದಲ್ಲೂ ಜಾತಿ ಪದ್ಧತಿ ಇತ್ತು, ದ್ರೋಣಾಚಾರ್ಯ ಗುರು ದಕ್ಷಿಣೆಗಾಗಿ ಏಕಲವ್ಯನ ಬೆರಳು ಕತ್ತರಿಸಿದಂತೆಯೇ ಈಗ ಕೇಂದ್ರ ಸರ್ಕಾರ ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸುತ್ತಿದೆ, ಎಲ್ಲವನ್ನೂ ಅದಾನಿ ಹಾಗೂ ಇನ್ನಿತರ ಕೈಗಾರಿಕೋದ್ಯಮಿಗಳ ಕೈಲಿ ಇಡುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಮಹಾಭಾರತದಲ್ಲಿ ಏಕಲವ್ಯ ಎಂಬ ತಪಸ್ವಿ ಯುವಕನಿದ್ದ. ಮುಂಜಾನೆ ಎದ್ದು, ಬಿಲ್ಲು ಬಾಣ ಹಿಡಿದು ಅಭ್ಯಾಸ ಮಾಡುತ್ತಿದ್ದ. ತಪಸ್ಸು ಎಂದರೆ ದೇಹವನ್ನು ಬಿಸಿಯಾಗಿಸುವುದು ಎಂದರ್ಥ ಎಂದು ರಾಹುಲ್ ಗಾಂಧಿ ಹೇಳಿದಾಗ, ಸದನದ ಸದಸ್ಯರು ನಗುವ ದೃಶ್ಯ ದಾಖಲಾಗಿದೆ.

video

“ದ್ರೋಣಾಚಾರ್ಯರು ಏಕಲವ್ಯನ ಬೆರಳುಗಳನ್ನು ಕತ್ತರಿಸಿದಂತೆಯೇ, ನೀವು (ಸರ್ಕಾರ) ದೇಶದ ಯುವಕರ ಹೆಬ್ಬೆರಳನ್ನು ಕತ್ತರಿಸಿದ್ದೀರಿ” ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ. ಇದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಆಡಳಿತ ಪಕ್ಷದ ಸದಸ್ಯರು ವಿಪಕ್ಷ ನಾಯಕರು ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿ ಸಂವಿಧಾನವನ್ನು ಉನ್ನತ ಎಂದು ಭಾವಿಸುವುದಿಲ್ಲ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಸಾವರ್ಕರ್ ಅವರು ಭಾರತದ ಸಂವಿಧಾನದಲ್ಲಿ ಭಾರತೀಯವಾದದ್ದು ಏನೂ ಇಲ್ಲ ಎಂದು ಟೀಕಿಸಿದ್ದರು. “ಮನುಸ್ಮೃತಿ ಹಿಂದೂ ರಾಷ್ಟ್ರಕ್ಕೆ ವೇದಗಳ ನಂತರ ಹೆಚ್ಚು ಪೂಜಿಸಬಹುದಾದ ಗ್ರಂಥವಾಗಿದೆ ಮತ್ತು ಪ್ರಾಚೀನ ಕಾಲದ ಸಂಸ್ಕೃತಿ, ಪದ್ಧತಿಗಳು, ಚಿಂತನೆ ಮತ್ತು ಆಚರಣೆಗೆ ಆಧಾರವಾಗಿದೆ. ಈ ಪುಸ್ತಕ ಶತಮಾನಗಳಿಂದ ನಮ್ಮ ರಾಷ್ಟ್ರದ ಆಧ್ಯಾತ್ಮಿಕ ಮತ್ತು ದೈವಿಕ ಉನ್ನತಿಯನ್ನು ಕ್ರೋಡೀಕರಿಸಿದೆ. ಇಂದು ಮನುಸ್ಮೃತಿಯೇ ಕಾನೂನಾಗಿದೆ.” ಇದು ಸಾವರ್ಕರ್ ಅವರ ಮಾತುಗಳು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಸಾವರ್ಕರ್ ಅವರ ಉದ್ದೇಶಿತ ಉಲ್ಲೇಖಗಳನ್ನು ಪಕ್ಷದ ನಾಯಕರು ಒಪ್ಪುತ್ತಾರೆಯೇ ಎಂದು ರಾಹುಲ್ ಗಾಂಧಿ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ನೀವು ಸಂವಿಧಾನವನ್ನು ರಕ್ಷಿಸುವ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಾಗ, ನೀವು ಸಾವರ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದೀರಿ, ನೀವು ಸಾವರ್ಕರ್ ಅವರನ್ನು ನಿಂದಿಸುತ್ತಿದ್ದೀರಿ, ನೀವು ಸಾವರ್ಕರ್ ಅವರನ್ನು ಮಾನಹಾನಿ ಮಾಡುತ್ತಿದ್ದೀರಿ ಎಂದು ಅವರು ಬಿಜೆಪಿಯನ್ನು ವ್ಯಂಗ್ಯವಾಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *