ಪೋಲಿಸ್ ವರಿಷ್ಠರಿಗೆ ಮಾಧ್ಯಮ ಪ್ರತಿನಿಧಿಗಳ ಸಂಘದ ಮನವಿ

ಸಿದ್ದಾಪುರ: ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದ ಸದಸ್ಯರು ಹಾಗೂ ಪ್ರಮುಖರು ಬುಧವಾರ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.


ತಾಲೂಕಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ನಾವುಗಳು ಸಂವಿಧಾನಬದ್ಧವಾಗಿ ಹಾಗೂ ಪತ್ರಿಕಾ ಧರ್ಮದಂತೆ ಕಳೆದ ಹಲವು ವರ್ಷಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದ್ದೇವೆ. ಜಾತಿ, ಧರ್ಮ ಬೇಧವಿಲ್ಲದೇ ಪಕ್ಷಾತೀತವಾಗಿ ಮತ್ತು ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಪ್ರೀತಿ, ವಿಶ್ವಾಸದ ಜೊತೆಗೆ ಗೌರವವನ್ನು ಸಂಪಾದಿಸಿದ್ದೇವೆ. ಸಾರ್ವಜನಿಕರ ಬದುಕಿನಲ್ಲಿರುವ ಕೆಲ ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಆರೋಪಗಳು ಸಾರ್ವಜನಿಕವಾಗಿ ವ್ಯಕ್ತವಾದಾಗ ಅದನ್ನು ಅವರು ತಮ್ಮ ವಿರುದ್ಧದ ಅಪಪ್ರಚಾರ ಎಂದು ಭಾವಿಸುವುದು ಸಾಮಾನ್ಯವಾಗಿದೆ. ಆದರೆ ಪತ್ರಕರ್ತರು ಯಾವುತ್ತೂ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದರಿಂದ ತಮ್ಮ ವೃತ್ತಿನಿಷ್ಠೆಯನ್ನು ಮತ್ತು ನಿಲುವನ್ನು ಸಾರ್ವಜನಿಕರ ಪರವಾಗಿ ವ್ಯಕ್ತಪಡಿಸುವುದು ಪತ್ರಿಕಾ ಧರ್ಮವಾಗಿದೆ. ಆದರೆ ಇದನ್ನು ಸಹಿಸದ ಕೆಲ ಜನಪ್ರತಿನಿಧಿಗಳು ತಮ್ಮ ಬೆಂಬಲಿಗರ ಮೂಲಕ ಪತ್ರಕರ್ತರ ವಿರುದ್ಧ ಸುಳ್ಳು ದೂರು ದಾಖಲಿಸುವುದು ಪತ್ರಿಕಾ ಸ್ವಾತಂತ್ರ್ಯದ ಕಗ್ಗೊಲೆಯಾಗಿದೆ.


ಸಂಘದ ಅಧ್ಯಕ್ಷ ಕನ್ನೇಶ ಕೋಲಶಿರ್ಸಿ ಮಾತನಾಡಿ, ಕುಮಟಾ ಶಾಸಕ ದಿನಕರ ಶೆಟ್ಟಿಯವರ ಅಭಿಮಾನಿಯಾದ ಜಯಾ ಶೇಟ್ ಮತ್ತು ಕುಮಟಾದ ಬಿಜೆಪಿಯ ಕೆಲ ಕಾರ್ಯಕರ್ತರು ಸೇರಿ ಕುಮಟಾ ತಾಲೂಕಿನ ಪತ್ರಕರ್ತರಾದ ಚರಣರಾಜ್ ನಾಯ್ಕರ ಮೇಲೆ ಸುಳ್ಳು ದೂರು ದಾಖಲಿಸಿರುವುದು ನಿಜಕ್ಕೂ ಖಂಡನೀಯ. ಪತ್ರಕರ್ತರ ಸಂವಿಧಾನಿಕ ಪತ್ರಿಕಾ ಸ್ವಾತಂತ್ರ್ಯವನ್ನು ಹರಣ ಮಾಡುವ ಮತ್ತು ಪತ್ರಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕಾರ್ಯವಾಗಿದೆ. ಹಾಗಾಗಿ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ದೂರನ್ನು ರದ್ದುಗೊಳಿಸುವ ಮೂಲಕ ಪತ್ರಕರ್ತರು ನಿರ್ಭಯರಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು. ಅಲ್ಲದೇ ಪತ್ರಕರ್ತರ ವಿರುದ್ಧ ಸುಳ್ಳು ದೂರುಗಳು ಬಂದಾಗ ಪೊಲೀಸ್ ಅಧಿಕಾರಿಗಳು ಅದನ್ನು ಪರಿಶೀಲಿಸಿ ಸತ್ಯಾಸತ್ಯತೆಯನ್ನು ಅರಿತುಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಬೇಕೆ ಹೊರತು ರಾಜಕಾರಣಿಗಳ ಒತ್ತಡಕ್ಕೆ ಮಣಿದು ನೇರವಾಗಿ ಪ್ರಕರಣ ದಾಖಲಿಸಿ ತೊಂದರೆ ನೀಡುವ ಕಾರ್ಯ ಪೊಲೀಸ್ ಇಲಾಖೆ ಮಾಡಬಾರದೆಂದು ಆಗ್ರಹಿಸಿದರು.


ರೈತ ಮುಖಂಡ ವೀರಭದ್ರ ನಾಯ್ಕ, ಸಾಮಾಜಿಕ ಧುರೀಣ ನಾಸಿರ್ ಖಾನ್ ಮನವಿ ನೀಡುವ ವೇಳೆ ಹಾಜರಿದ್ದು ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾಗರಾಜ ನಾಯ್ಕ ಮೋಳ್ಕೋಡ, ಕಾರ್ಯದರ್ಶಿ ಯಶವಂತ ನಾಯ್ಕ ತ್ಯಾರ್ಸಿ, ಖಜಾಂಚಿ ಪ್ರಶಾಂತ ಶೇಟ್, ಸದಸ್ಯ ದಿವಾಕರ ಸಂಪಖಂಡ ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *