ಎಐಸಿಸಿ ಅಧಿವೇಶನದ ಶತಮಾನೋತ್ಸವ ಯಶಸ್ಸಿಗೆ ಕರೆ……..

ಸಿದ್ದಾಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿರುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.

ಪಟ್ಟಣದ ಹೊಸೂರಿನ ಬಂಕೇಶ್ವರ ಸಭಾಭವನದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧಿವೇಶನ ನೂರು ವರ್ಷಗಳ ಹಿಂದೆ ಜರುಗಿತ್ತು. ಆ ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿಸೆಂಬರ 27 ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಡಿಸೆಂಬರ 26 ರಂದು ಮೊದಲ ದಿನ ಎಐಸಿಸಿ ಕಾರ್ಯಕಾರಿಣಿ ಸಭೆ ಹಾಗೂ 27 ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ಪ್ರತಿಯೊಂದು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಪಕ್ಷದ ಜವಾಬ್ದಾರಿ ವಹಿಸಿಕೊಂಡವರು ಅಧವೇಶನದಲ್ಲಿ ಭಾಗಿಯಾಗಿ ಅದರ ಮಹತ್ವ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಡಿಸಿಸಿ ಉಪಾಧ್ಯಕ್ಷ ವಿ.ಎನ್.ನಾಯ್ಕ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಬಿ.ಆರ್.ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೀಮಾ ಹೆಗಡೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ಲಾ ಹೆರೂರ, ಪರಿಶಿಷ್ಟ ವಿಭಾಗದ ಅಧ್ಯಕ್ಷ ವೆಂಕಟ್ರಮಣ ಹಸ್ಲರ್, ಜಿಪಂ ಮಾಜಿ ಸದಸ್ಯೆ ಇಂದಿರಾ ನಾಯ್ಕ, ಪ್ರಮುಖರಾದ ನಾಸಿರ್ ಖಾನ್, ಸಿ.ಆರ್.ನಾಯ್ಕ, ವಿವೇಕ ಭಟ್, ನಟರಾಜ ಜಿಡ್ಡಿ, ಸೀತರಾಮ ಗೌಡ, ಮತ್ತಿತರರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ...

ಪ್ರತಿಭೋತ್ಸವ: ಕಲಾವಿದರಿಗೆ ಸನ್ಮಾನ

ಸಿದ್ದಾಪುರ: ಪಟ್ಟಣದ ನಿವೇದಿತಾ ಮಹಿಳಾ ಮಂಡಳಿಯಲ್ಲಿ ನಡೆಯುತ್ತಿರುವ ಶ್ರೀ ಸದ್ಗುರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಾ ವಿದ್ಯಾಲಯ ದ ಸಿದ್ದಾಪುರ ಶಾಖೆಯ ಪ್ರತಿಭೋತ್ಸವ ಕಾರ್ಯಕ್ರಮ ಅಕ್ಟೋಬರ್...

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

Latest Posts

ಅಂತರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಕಂಚು ಪಡೆದ ಶ್ಯಾಮಸುಂದರ ಜಿ.

ಸಿದ್ದಾಪುರ: ಬೆಂಗಳೂರಿನಲ್ಲಿ ನಡೆದ Masters Asian Aquatic Swimming Championship – 2026 ಅಂತಾರಾಷ್ಟ್ರೀಯ ಈಜು ಕ್ರೀಡಾಕೂಟದಲ್ಲಿ ಸಿದ್ದಾಪುರದ ನಿವಾಸಿ ಹಾಗೂ ಸಾಗರ ತಾಲ್ಲೂಕಿನಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ಯಾಮಸುಂದರ ಜಿ. ಪುರುಷರ 200 ಮೀಟರ್ ರಿಲೇ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಅಕ್ಟೋಬರ್ 4ರಿಂದ 10ರವರೆಗೆ ಬೆಂಗಳೂರಿನ ದ್ರಾವಿಡ್ ಪಡುಕೋಣೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *