ಸಹಿಷ್ಣುತೆ, ಸಮಾನತೆ, ಸೌಹಾರ್ದತೆಯೇ ಮಾಚಿದೇವರ ಮೌಲ್ಯಗಳು

ಸಮಾನತೆ, ಸಹಿಷ್ಣುತೆ,ಸೌಹಾರ್ದತೆಯಿಂದ ಎಲ್ಲರೊಳಗೊಂದಾಗಿ ಬಾಳುವ ಜಾತ್ಯಾತೀತತೆ ಅಳವಡಿಸಿಕೊಂಡರೆ ನಾವು ಮಡಿವಾಳ ಮಾಚಿದೇವರನ್ನು ಗೌರವಿಸಿದಂತೆ ಎಂದು ಕೋಲಶಿರ್ಸಿ ಪ.ಪೂ. ಕಾಲೇಜಿನ ಉಪನ್ಯಾಸಕ ಮಂಜಪ್ಪ ಎಂ.ಜಿ. ಹೇಳಿದರು. ಅವರು ಸಿದ್ಧಾಪುರ ತಹಸಿಲ್ಧಾರರ ಕಛೇರಿ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ತಾಲೂಕಾ ಮಡಿವಾಳ ಸಮಾಜದ ಸಂಘ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಿಶೇಶ ಉಪನ್ಯಾಸ ನೀಡಿದರು. ಈ ಜಯಂತಿ ಅಂಗವಾಗಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಿ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಾ.ಪಂ. ಕಾ.ನಿ.ಅ. ದೇವರಾಜ್‌ ಹಿತ್ತಲಕೊಪ್ಪ ಮಾತನಾಡಿ ಎಲ್ಲಾ ಸಮಾಜದವರನ್ನೂ ಒಗ್ಗೂಡಿಸಿ ಮಾಡುವ ಇಂಥ ಕಾರ್ಯಕ್ರಮಗಳಿಂದ ಪರಸ್ಪರರು ಸಮಾಜದ ಗುರುಗಳ ಬಗ್ಗೆ ಅರಿಯಲು ಸಾಧ್ಯ ಇದರಿಂದ ಸೌಹಾರ್ದತೆ ಹೆಚ್ಚುತ್ತದೆ ಎಂದು ಪ್ರತಿಪಾದಿಸಿದರು.

ನಾಮಧಾರಿ ಸಮಾಜದ ಪರವಾಗಿ ಸನ್ಮಾನ ಸ್ವೀಕರಿಸಿದ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ನಾಗರಾಜ್‌ ಕೆ.ಜಿ. ಮಾತನಾಡಿ ವಚನಗಳ ಸಂರಕ್ಷಣೆ ಮೂಲಕ ಬಸವಣ್ಣನ ಜ್ಞಾನಭಂಡಾರ ಉಳಿಸಿ ಕೊಟ್ಟ ಮಡಿವಾಳ ಮಾಚಿದೇವ ಇತರ ಸಮಾಜಕ್ಕೂ ಮಾದರಿ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ತಹಸಿಲ್ಧಾರ ಎಂ.ಆರ್.‌ ಕುಲಕರ್ಣಿ ಸಮಾನತೆ, ಮೌಢ್ಯ ವಿರೋಧಕ್ಕಾಗಿ ಬದುಕನ್ನೇ ಪಣಕ್ಕಿಟ್ಟ ಮಡಿವಾಳ ಮಾಚಿದೇವ ಪವಾಡಪುರುಷ ಎಂದರು.

ತಾಲೂಕಾ ಮಡಿವಾಳ ಸಮಾಜದ ಅಧ್ಯಕ್ಷ ಪಿ.ಬಿ.ಹೊಸೂರು ಅಧ್ಯಕ್ಷತೆ ವಹಿಸಿದ್ದರು. ಸಂಗೀತಾ ಭಟ್ಟ ಸ್ವಾಗತಿಸಿದರು. ಗ್ರೇಡ್‌ ೨ ತಹಸಿಲ್ಧಾರ ಶ್ಯಾಮಸುಂದರ್‌ ಜಿ.ಎಲ್.‌ ನಿರೂಪಿಸಿದರು. ಕೃಷ್ಣಮೂರ್ತಿ ಕಡಕೇರಿ, ವಿಶ್ವಗೌಡ ಇಟಗಿ, ಕೆ.ಟಿ. ಹೊನ್ನೆಗುಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *