ಕಂಡಕ್ಟರ್‌ ಮಾತ್‌ ಕೇಳಲ್ಲ….. ಕರೆಂಟ್‌ ಕಂಪ್ಲೇಂಟ್‌ ಇಲ್ಲ…..!

ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ ಗ್ಯಾರಂಟಿ ಅನುಷ್ಠಾನದಲ್ಲಿ ಮೊದಲ ಸ್ಥಾನದಲ್ಲಿದೆ. ಉತ್ತರಕನ್ನಡದಲ್ಲಿ ಸಿದ್ಧಾಪುರ ಜಿಲ್ಲೆಯ ಮೊದಲ ಸ್ಥಾನಕ್ಕಾಗಿ ಸ್ಫರ್ಧೆಯಲ್ಲಿದೆ. ಈ ಬಗ್ಗೆ ಇಂದು ನಡೆದ ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ ವೇಳೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮೀತಿ ತಾಲೂಕಾ ಅಧ್ಯಕ್ಷ ಕೆ.ಜಿ. ನಾಗರಾಜ್‌ ವಿವರ ನೀಡಿದರು.

ಸಭೆಯ ಪ್ರಾರಂಭದಲ್ಲಿ ವಿವರಣೆ ನೀಡದ ಶಿಶು ಅಭಿವೃದ್ಧಿ ಮತ್ತು ಮಹಿಳಾ ಕಲ್ಯಾಣ ಅಧಿಕಾರಿ ತಾಲೂಕಿನ ಸಾಧನೆಯ ವಿವರ ನೀಡಿದರು. ನಂತರ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಯಿತು. ಶಕ್ತಿ ಯೋಜನೆಯ ಮಾಹಿತಿ ನೀಡಿದ ನಿಯಂತ್ರಣಾಧಿಕಾರಿ ಎಂ.ಎನ್.‌ ನಾಯ್ಕ ಸಾರಿಗೆ ಇಲಾಖೆ ಶಕ್ತಿ ಯೋಜನೆಯ ಯಶಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಇದಕ್ಕಿ ಪ್ರತಿಕ್ರೀಯಿಸಿದ ಅನುಷ್ಠಾನ ಸಮೀತಿ ಹಲಗೇರಿ ಸದಸ್ಯ ರವಿಕುಮಾರ ನಾಯ್ಕ ಸಾರಿಗೆ ಸಂಸ್ಥೆ ವಾಹನಗಳಲ್ಲಿ ವಿದ್ಯಾರ್ಥಿಗಳು ಮತ್ತು ಮಹಿಳೆಯರಿಗೆ ನಿರ್ವಾಹಕರು ಉಪೇಕ್ಷೆ ಮಾಡುವುದು,ನಿಂದಿಸುವ ಬಗ್ಗೆ ದೂರು ಹೇಳಿದರು. ಇದಕ್ಕೆ ಪ್ರತಿಕ್ರೀಯಿಸಿದ ನಾಯ್ಕ ಶಿರಸಿ ಡಿಪೋ ಸಿಬ್ಬಂದಿಗಳು ಮಾತು ಕೇಳುತ್ತಾರೆ ಸಾಗರ ಡಿಪೋ ಸಿಬ್ಬಂದಿಗಳು ನಮ್ಮ ಮಾತು ಕೇಳುವುದಿಲ್ಲ ಅವರಿಗೆ ಸಾಗರ ಡಿಪೋ ಕ್ಕೆ ದೂರು ನೀಡಬೇಕು ಎಂದರು.

ಹೊಂದಾಣಿಕೆಯಾಗದ ದಾಖಲೆಗಳು, ಮೃತರ ದಾಖಲಾತಿ ವಿಳಂಬ ಸೇರಿದಂತೆ ಕೆಲವೇ ಕೆಲವು ತಾಂತ್ರಿಕ ಅಡಚಣೆಯ ಪ್ರಕರಣಗಳನ್ನು ಬಿಟ್ಟರೆ ಪ್ರತಿಶತ ೯೮ ರಷ್ಟು ಸಾಧನೆ ಸಿದ್ಧಾಪುರ ತಾಲೂಕಿನ ಪಂಚ ಗ್ಯಾರಂಟಿಗಳಲ್ಲಾಗಿದೆ ಎನ್ನುವ ವಿವರಣೆ ನಡುವೆ ಸಂಬಂಧಿಸಿದ ಅಧಿಕಾರಿಗಳು ತಮ್‌ ತಮ್ಮ ಇಲಾಖೆಗಳ ಪ್ರಗತಿ ವಿವರಿಸಿದರು.

ರಾಜ್ಯದಲ್ಲಿ ಉತ್ತರ ಕನ್ನಡ ಪಂಚಗ್ಯಾರಂಟಿ ಅನುಷ್ಠಾನದಲ್ಲಿ ಮೊದಲ ಸ್ಥಾನದಲ್ಲಿದೆ, ಸಿದ್ದಾಪುರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲಸ್ಥಾನಕ್ಕೇರುವ ಹಂತ ತಲುಪಲಿದೆ ಎಂದು ತಾಲೂಕಾ ಪಂಚ ಗ್ಯಾರಂಟಿ ಅನುಷ್ಠಾನ ಸಮೀತಿ ಅಧ್ಯಕ್ಷ ಕೆ.ಜಿ. ನಾಗರಾಜ್‌ ತಮ್ಮ ಸಂತಸ ಹಂಚಿಕೊಂಡರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *