

- ಸಿದ್ಧಾಪುರ ಅವರಗುಪ್ಪಾದ ಮಾರಿಕಾಂಬಾ ಜಾತ್ರೆ ಏ.೮ ರ ಮಂಗಳವಾರ ಮುಕ್ತಾಯವಾಗಲಿದ್ದು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರತಿದಿನ ರಾತ್ರಿ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆಯುತ್ತಿವೆ.



* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

- ಸಿದ್ಧಾಪುರ ತಾಲೂಕಿನ ಪ್ರಸಿದ್ಧ ಬೇಡ್ಕಣಿ ಶನಿ ದೇವರ ಜಾತ್ರಾ ಮಹೋತ್ಸವ ಏ. ೫ ರ ಶನಿವಾರ ನಡೆಯಲಿದೆ.
- ರವಿವಾರ ಜoಗೀ ಕುಸ್ತಿ……..
- ಸಿದ್ದಾಪುರ :- ತಾಲೂಕಿನ ಹೊಸೂರಿನ ಸಾಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ಯ 6ನೇ ವರ್ಷದ ಜಂಗಿ ನಿಕಾಲಿ ಕುಸ್ತಿ ಇದೇ ಎಪ್ರಿಲ್ 6 -2025ನೇ ರವಿವಾರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಸಮಿತಿಯ ಚೈತನ್ಯ ವಿ ಹೊಸೂರ್ ತಿಳಿಸಿದ್ದಾರೆ.
- ಅವರು ಬಂಕೇಶ್ವರ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕುಸ್ತಿ ಪಂದ್ಯಾವಳಿಯನ್ನು ಮುಕ್ತವಾಗಿ ನಡೆಸಲಿದ್ದೇವೆ.
- ಸಿರ್ಸಿ ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಗರ ಕ್ಷೇತ್ರದ ಗೋಪಾಲಕೃಷ್ಣ ಬೇಲೂರು ಅಂಕಣವನ್ನು ಉದ್ಘಾಟಿಸಲಿದ್ದಾರೆ. ಶ್ರೀ ಬಂಕೇಶ್ವರ ಸಂಸ್ಕೃತಿಕ ಮತ್ತು ಕ್ರೀಡಾ ಸಮಿತಿಯ ಕಾರ್ಯಕ್ರಮದ ಅಧ್ಯಕ್ಷರಾದ ಲಕ್ಷ್ಮಣ್ ವಿ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶ್ರೀ ಬಂಕೇಶ್ವರ ಸಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ಅಧ್ಯಕ್ಷ ಬಸವರಾಜ್ ಡಿ ನಾಯ್ಕ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ ಜಿ ನಾಗರಾಜ್, ಪಟ್ಟಣ ಪಂಚಾಯತ್ ಸದಸ್ಯ ಮಾರುತಿ ನಾಯ್ಕ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ಎಲ್ ನಾಯ್ಕ್, ಉದ್ಯಮಿ ರೂಡಲ್ಪ್ ಎಂ ಫರ್ನಾಂಡಿಸ್, ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
- ಸುದ್ದಿಗೋಷ್ಠಿಯಲ್ಲಿ ಶ್ರೀ ಬಂಕೇಶ್ವರ ಸಂಸ್ಕೃತಿಕ ಮತ್ತು ಕ್ರೀಡಾ ಸಮಿತಿ ಅಧ್ಯಕ್ಷ ಬಸವರಾಜ್ ಡಿ ನಾಯ್ಕ, ಕಾರ್ಯಕ್ರಮದ ಅಧ್ಯಕ್ಷರಾದ ಲಕ್ಷ್ಮಣ್ ವಿ ನಾಯ್ಕ, ಉಪಾಧ್ಯಕ್ಷ ಜಗದೀಶ್ವರ ಕೆ ನಾಯ್ಕ ಕಾರ್ಯದರ್ಶಿ ರಾಘವೇಂದ್ರ ಎಂ ಮಡಿವಾಳ್ ಉಪಸ್ಥಿತರಿದ್ದರು
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






